ಬಂಟ್ವಾಳ (ವಿಶ್ವಕನ್ನಡಿಗ ನ್ಯೂಸ್) : ಪಾಣೆಮಂಗಳೂರು ಸಮೀಪದ ನಂದಾವರ ಕೇಂದ್ರ ಜುಮಾ ಮಸೀದಿ ಸಮೀಪ ಅಂತ್ಯ ವಿಶ್ರಮ ಹೊಂದುತ್ತಿರುವ ಔಲಿಯಾಗಳ ಹೆಸರಿನಲ್ಲಿ ಪ್ರತಿ ವರ್ಷ ನಡೆಸಿಕೊಂಡು ಬರುವ ಉರೂಸ್ ಕಾರ್ಯಕ್ರಮ ಇದೇ ಬರುವ ಮಾರ್ಚ್ 15 ರಿಂದ 20 ರವರೆಗೆ ನಡೆಯಲಿದ್ದು, ವಿವಿಧ ಧಾರ್ಮಿಕ ಪಂಡಿತರುಗಳಿಂದ ಪ್ರವಚನ ಹಾಗೂ ಸಮಾರೋಪ ಸಮಾರಂಭ ನಡೆಯಲಿದೆ. ಕಾರ್ಯಕ್ರಮದಲ್ಲಿ ಧಾರ್ಮಿಕ, ಸಾಮಾಜಿಕ ಮುಖಂಡರುಗಳು ಭಾಗವಹಿಸಲಿದ್ದಾರೆ ಎಂದು ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಮುಹಮ್ಮದ್ ಶರೀಫ್ ನಂದಾವರ ಹಾಗೂ ಪ್ರಧಾನ ಕಾರ್ಯದರ್ಶಿ ಇಮ್ರಾನ್ ಹೈವೇ ಅವರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.