ಬಂಟ್ವಾಳ (ವಿಶ್ವಕನ್ನಡಿಗ ನ್ಯೂಸ್) : ತಾಲೂಕಿನ ವಿಟ್ಲ ಸಮೀಪದ ಕಾಶಿಮಠ ಎಂಬಲ್ಲಿ ಸೋಮವಾರ ಬೆಳಿಗ್ಗೆ ಬೊಲೆರೋ ವಾಹನ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ, ಮಾಣಿ ಗ್ರಾಮದ ಪಲ್ಲತ್ತಿಲ ನಿವಾಸಿ ಬಾಲಕೃಷ್ಣ (55) ಮೃತಪಟ್ಟಿದ್ದಾರೆ.
ಬಾಲಕೃಷ್ಣ ಅವರು ವಿಟ್ಲ ಕಡೆಯಿಂದ ಉಕ್ಕುಡ ಕಡೆಗೆ ತೆರಳುತ್ತಿದ್ದ ವೇಳೆ ಹಿಂದಿನಿಂದ ವಿಟ್ಲ ಕಡೆಯಿಂದ ಉಕ್ಕುಡ ಕಡೆಗೆ ಬರುತ್ತಿದ್ದ ಬೋಲೆರೋ ವಾಹನ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಘಟನೆಗೆ ಬೊಲೆರೋ ಚಾಲಕನ ಅಜಾಗರೂಕತೆಯ ಚಾಲನೆಯೇ ಕಾರಣ ಎಂದು ಪೆÇಲೀಸರು ತಿಳಿಸಿದ್ದಾರೆ. ಈ ಬಗ್ಗೆ ವಿಟ್ಲ ಪೆÇಲೀಸ್ ಠಾಣೆಯಲ್ಲಿ ಕಲಂ 279, 304(ಎ) ಐಪಿಸಿ ಯಂತೆ ಪ್ರಕರಣ ದಾಖಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.