ಮಂಗಳೂರು (ವಿಶ್ವಕನ್ನಡಿಗ ನ್ಯೂಸ್) : ನಗರ ಪೆÇಲೀಸರು ಸಂಚಾರ ನಿಯಮ ಉಲ್ಲಂಘನೆ ಕುರಿತು ಕಳೆದೆರಡು ದಿನಗಳಿಂದ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದಾರೆ. ಕಾರ್ಯಾಚರಣೆ ವೇಳೆ ಪೆÇಲೀಸರು ಒಟ್ಟು 2207 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ಈ ಪೈಕಿ 937 ಹೆಲ್ಮೆಟ್ ರಹಿತ ಸಂಚಾರ, 198 ದೋಷಯುಕ್ತ ನಂಬರ್ ಪ್ಲೇಟ್ ಹಾಗೂ 189 ಸೀಟ್ ಬೆಲ್ಟ್ ರಹಿತ ವಾಹನ ಚಲಾವಣೆ ಸೇರಿದೆ. ಸಂಚಾರ ನಿಯಮ ಉಲ್ಲಂಘನೆಗಾಗಿ ಒಟ್ಟು 10.29 ಲಕ್ಷ ರೂಪಾಯಿ ದಂಡ ಸಂಗ್ರಹಿಸಲಾಗಿದೆ ಎಂದು ವಿವರ £ೀಡಿರುವ ಮಂಗಳೂರು ನಗರ ಪೆÇಲೀಸ್ ಕಮಿಷನರ್ ಎನ್ ಶಶಿಕುಮಾರ್ ಕಾರ್ಯಾಚರಣೆ ಮುಂದುವರಿಯಲಿದೆ ಎಂದಿದ್ದಾರೆ.
ಪ್ರಧಾನ ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.