ಚಿಕ್ಕಬಳ್ಳಾಪುರ,(ವಿಶ್ವಕನ್ನಡಿಗ ನ್ಯೂಸ್) ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಕರಿಯಪ್ಪನಹಳ್ಳಿ ಅರಣ್ಯ ಪ್ರದೇಶ ಸಮೀಪ ಚಿರತೆ ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
ತಲಕಾಯಲಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಕರಿಯಪ್ಪನಹಳ್ಳಿ-ತಲಕಾಯಲಬೆಟ್ಟ ಗ್ರಾಮದ ಕನ್ನಂ ಬೈರೇಶ್ವರ ಗುಡಿಯ ಸಮೀಪ ಚಿರತೆ ಕಾಣಿಸಿಕೊಂಡಿದ್ದು ಗ್ರಾಮಸ್ಥರು ಆತಂಕಗೊಂಡಿದ್ದಾರೆ ಚಿರತೆಯೊಂದಿಗೆ ಚಿರತೆ ಮರಿಗಳು ಸಹ ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರು ಆತಂಕದಲ್ಲಿ ಜೀವನ ನಡೆಸುವಂತಾಗಿದೆ.
ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟದ ಬೆಟ್ಟದಲ್ಲಿ ಈ ಹಿಂದೆ ಚಿರತೆ ಪ್ರತ್ಯಕ್ಷವಾಗಿ ಗ್ರಾಮಸ್ಥರು ಆತಂಕಗೊಂಡಿದ್ದರು ಇದೀಗ ಗ್ರಾಮಸ್ಥರು ವಾಹನದಲ್ಲಿ ಹೋಗುವ ವೇಳೆಯಲ್ಲಿ ಚಿರತೆ ಕಾಣಿಸಿಕೊಂಡಿದ್ದು ಗ್ರಾಮಸ್ಥರು ಭಯಭೀತಿರಾಗಿದ್ದು ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆ ಮತ್ತು ಅದರ ಮರಿಗಳನ್ನು ಸೆರೆಹಿಡಿಯಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ ಚಿರತೆ ಈಗಾಗಲೇ ಕರಿಯಪ್ಪನಹಳ್ಳಿ ಸುತ್ತಮುತ್ತಲು ಕುರಿ-ಮೇಕೆ ಮರಿಗಳನ್ನು ತನ್ನ ಆಹಾರ ಮಾಡಿಕೊಂಡಿದ್ದು ಮುಂದಿನ ದಿನಗಳಲ್ಲಿ ಜನರಿಗೆ ತೊಂದರೆ ಆಗುವ ಮುನ್ನ ಅರಣ್ಯ ಇಲಾಖೆಯ ಅಧಿಕಾರಿಗಳು ಗಮನಹರಿಸಬೇಕೆಂದು ಗ್ರಾಮಸ್ಥರು ಕೋರಿದ್ದಾರೆ.
ವರದಿ: ತೆ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.