ಮಸ್ಕತ್(www.vknews.in): ಕರೊನವೈರಸ್ ಪ್ರಕರಣಗಳಲ್ಲಿ ಇತ್ತೀಚಿಗೆ ಕಂಡು ಬರುತ್ತಿರುವ ಹೆಚ್ಚಳದ ಹಿನ್ನೆಲೆಯಲ್ಲಿ ಒಮಾನ್ ಸರಕಾರವು ರಾತ್ರಿಯ ಕರ್ಫ್ಯೂ ವಿಧಿಸಲು ನಿರ್ಧರಿಸಿದೆ.
ಹೊಸ ಕ್ರಮಗಳ ಭಾಗವಾಗಿ, ಮಾರ್ಚ್ 28 ರಿಂದ ಜಾರಿಗೆ ಬರುವಂತೆ ಎಲ್ಲಾ ವಾಣಿಜ್ಯ ಚಟುವಟಿಕೆಗಳು ಹಾಗೂ ಜನರು ಮತ್ತು ವಾಹನಗಳ ಸಂಚಾರವನ್ನು ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ಸ್ಥಗಿತಗೊಳಿಸಿ ಆದೇಶ ಹೊರಡಿಸಲಾಗಿದ್ದು, ಈ ನಿರ್ಬಂಧವು ಎಪ್ರಿಲ್ 8 ರ ವರೆಗೆ ಜಾರಿಯಲ್ಲಿರುತ್ತದೆ.
ಕೊವಿಡ್ 19 ಸೋಂಕಿನ ಪ್ರಕರಣಗಳಲ್ಲಿ ದಿನನಿತ್ಯದ ಉಲ್ಬಣವು, ಆಸ್ಪತ್ರೆ ವಾರ್ಡ್ಗಳು ಮತ್ತು ತೀವ್ರ ನಿಗಾ ಘಟಕಗಳಿಗೆ ದಾಖಲಾಗುತ್ತಿರುವ ರೋಗಿಗಳ ಸಂಖ್ಯೆ ಮತ್ತು ಸಾವಿನ ಪ್ರಕರಣಗಳಲ್ಲಿ ಹೆಚ್ಚಳದಿಂದಾಗಿ ಈ ನಿರ್ಧಾರವನ್ನು ಕೈಗೊಂಡಿದ್ದು, ಅಗತ್ಯವೆನಿಸಿದಲ್ಲಿ ಸಂಪೂರ್ಣ ಲಾಕ್ ಡೌನ್ ಹಾಗೂ ಜನ ಸಂಚಾರವನ್ನು ಸಂಪೂರ್ಣ ನಿರ್ಬಂಧಿಸುವಂತಹ ಕಠಿನ ಕ್ರಮ ಕೈಗೊಳ್ಳಲಾಗುವುದೆಂದು ಸರಕಾರದ ವರದಿಯನ್ನು ಉಲ್ಲೇಖಿಸಿ ಒಮನ್ ನ್ಯೂಸ್ ಏಜನ್ಸಿ ವರದಿ ಮಾಡಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.