ಚಿಕ್ಕಬಳ್ಳಾಪುರ,(ವಿಶ್ವಕನ್ನಡಿಗ ನ್ಯೂಸ್): ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಡಾ ನಾರಾಯಣಗೌಡ ಅವರು ಮಾ.31 ರಂದು ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ.
ಮಾರ್ಚ್ 31 ರಂದು ಚಿಕ್ಕಬಳ್ಳಾಪುರ ಜಿಲ್ಲೆಗೆ ಬೆಳಗ್ಗೆ 10.45 ಕ್ಕೆ ಭೇಟಿ ನೀಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಗತಿ ಪರಿಶೀಲನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸ್ಥಳೀಯ ಶಾಸಕರ ಪ್ರದೇಶಾಭಿವೃದ್ದಿ ಅನುದಾನ ಬಳಕೆ ಬಯಲು ಸೀಮೆ ಪ್ರದೇಶ ಅಭಿವೃದ್ದಿ ಅನುದಾನ ಬಳಕೆ ಮತ್ತು ಬೆಳೆ ವಿಮೆ ಪರಿಹಾರದ ಹಣ ಪಾವತಿ ಬಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪರಿಶೀಲನೆ ನಡೆಸಲಿದ್ದಾರೆ.
ಪ್ರಗತಿ ಪರಿಶೀಲನಾ ಸಭೆಯ ಬಳಿಕ ನಗರದ ಕ್ರೀಡಾ ವಸತಿ ನಿಲಯ ಮತ್ತು ಕ್ರೀಡಾಂಗಣಕ್ಕೆ ಭೇಟಿ ನೀಡಲಿದ್ದಾರೆ. ನಂತರ ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ ತರುವಾಯ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲಿದ್ದಾರೆ ಮಧ್ಯಾಹ್ನ 3 ಗಂಟೆಗೆ ಕೋಲಾರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಅಲ್ಲಿಯೂ ಇಲಾಖೆಯ ಪ್ರಗತಿ ಪರಿಶೀಲನೆ,ಕ್ರೀಡಾ ನಿಲಯಕ್ಕೆ ಭೇಟಿ ಹಾಗೂ ಬಿಜೆಪಿ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರು ಮತ್ತು ಸಾರ್ವಜನಿಕರ ಆಹ್ವಾಲುಗಳನ್ನು ಆಲಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಹೆಚ್ಜಿ ಪ್ರಭಾಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ತೆ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.