ಯುಪಿ(ವಿಶ್ವಕನ್ನಡಿಗ ನ್ಯೂಸ್): ಉತ್ತರ ಪ್ರದೇಶ ಸಿಎಂ ಯೋಗಿ ಅಧಿತ್ಯನಾಥ್ ಅವರು ಬುಧವಾರ ಕೋವಿಡ್ -19 ಪರೀಕ್ಷೆ ಮಾಡಿದ್ದು, ಕೊರೋನ ಪಾಸಿಟಿವ್ ಎಂದು ತಿಳಿದು ಬಂದಿದೆ.
ನಾನು ಸ್ವಯಂ ಕ್ವಾರಂಟೈನ್ ನಲ್ಲಿದ್ದೇನೆ ಮತ್ತು ವೈದ್ಯರ ಸಮಾಲೋಚನೆಯನ್ನು ಸಂಪೂರ್ಣವಾಗಿ ಅನುಸರಿಸುತ್ತಿದ್ದೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ತನ್ನ ಸಂಪರ್ಕಕ್ಕೆ ಬಂದ ಜನರನ್ನು ಕೋವಿಡ್ -19 ಪರೀಕ್ಷೆಗಳಿಗೆ ಒಳಪಡಿಸಬೇಕು ಮತ್ತು ಮುನ್ನೆಚ್ಚರಿಕೆ ವಹಿಸಬೇಕು ಎಂದು ಅವರು ಒತ್ತಾಯಿಸಿದರು. ಅಧಿತ್ಯನಾಥ್ ತನ್ನನ್ನು ಪ್ರತ್ಯೇಕಿಸಿಕೊಂಡ ಒಂದು ದಿನದ ನಂತರ ಅವರ ಕೆಲವು ಸಿಬ್ಬಂದಿಗಳಿಗೆ ಕೂಡ ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿಯಾಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.