ಇಸ್ಲಾಮಾಬಾದ್ (ವಿಶ್ವ ಕನ್ನಡಿಗ ನ್ಯೂಸ್) : ಕೋವಿಡ್ ವಿರುದ್ಧ ನಾವು ಒಟ್ಟಾಗಿ ಹೋರಾಡಬೇಕು, ಕೊರೋನಾ ಹೋರಾಟದಲ್ಲಿ ಭಾರತದೊಂದಿಗೆ ನಾವಿದ್ದೇವೆ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.
ಮಾರಕ ಕೊರೋನಾ ಪ್ರಕರಣ ಭಾರತದಲ್ಲಿ ದಿನೇ ದಿನೇ ಏರಿಕೆಯಾಗುತ್ತಿರುವಂತೆಯೇ ದೇಶದಲ್ಲಿ ಆಕ್ಸಿಜನ್ ಮತ್ತು ಆಸ್ಪತ್ರೆ ಬೆಡ್ ಗಳಿಗಾಗಿ ಹಾಹಾಕಾರ ಆರಂಭವಾಗಿದೆ. ಭಾರತದ ಈ ಪರಿಸ್ಥಿತಿ ಇದೀಗ ವಿಶ್ವಾದ್ಯಂತ ಸುದ್ದಿಯಾಗುತ್ತಿದ್ದು, ಪಾಕಿಸ್ತಾನ ಪ್ರಧಾನಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಭಾರತದೊಂದಿಗೆ ನಾವಿದ್ದೇವೆ ಎಂದಿದ್ದಾರೆ.
I want to express our solidarity with the people of India as they battle a dangerous wave of COVID-19. Our prayers for a speedy recovery go to all those suffering from the pandemic in our neighbourhood & the world. We must fight this global challenge confronting humanity together — Imran Khan (@ImranKhanPTI) April 24, 2021
I want to express our solidarity with the people of India as they battle a dangerous wave of COVID-19. Our prayers for a speedy recovery go to all those suffering from the pandemic in our neighbourhood & the world. We must fight this global challenge confronting humanity together
— Imran Khan (@ImranKhanPTI) April 24, 2021
ಈ ಕುರಿತಂತೆ ತಮ್ಮ ಅಧಿಕೃತ ಖಾತೆಯಲ್ಲಿ ಟ್ವೀಟ್ ಮಾಡಿರುವ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು, ಮಾರಕ ಕೋವಿಡ್-19 ವಿರುದ್ಧ ಹೋರಾಟ ನಡೆಸುತ್ತಿರುವ ಭಾರತದ ಜನರೊಂದಿಗೆ ನಮ್ಮ ಒಗ್ಗಟ್ಟನ್ನು ವ್ಯಕ್ತಪಡಿಸಲು ನಾನು ಬಯಸುತ್ತೇನೆ. ನಮ್ಮ ನೆರೆಯ ದೇಶ ಮತ್ತು ಇಡೀ ಜಗತ್ತಿನಲ್ಲಿ ಕೋವಿಡ್ ಸಾಂಕ್ರಾಮಿಕದಿಂದ ಬಳಲುತ್ತಿರುವವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಮಾನವೀಯತೆಯು ಎದುರಿಸುತ್ತಿರುವ ಈ ಜಾಗತಿಕ ಸವಾಲಿನ ವಿರುದ್ಧ ನಾವು ಒಗ್ಗೂಡಿ ಹೋರಾಡಬೇಕು ಎಂದು ಟ್ವೀಟ್ ಮಾಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.