ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳ ನಡುವಿನ ಐಪಿಎಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಕೋಲ್ಕತಾ ನೈಟ್ ರೈಡರ್ಸ್ ತಂಡದ ಇಬ್ಬರು ಆಟಗಾರರು ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.
ಮೂಲಗಳ ಪ್ರಕಾರ ಕೋಲ್ಕತಾ ನೈಟ್ ರೈಡರ್ಸ್ ತಂಡದ ಆಟಗಾರರಾದ ವರುಣ್ ಚಕ್ರವರ್ತಿ ಮತ್ತು ಸಂದೀಪ್ ವಾರಿಯರ್ ಅವರಲ್ಲಿ ಸೋಂಕು ಕಾಣಿಸಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಅಹಮದಾಬಾದ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಕೋಲ್ಕತಾ ನೈಟ್ ರೈಡರ್ಸ್ (KKR) ನಡುವೆ ನಡೆಯಬೇಕಿದ್ದ ಪಂದ್ಯವನ್ನು ಮುಂದೂಡಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.