ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ರಾಜಸ್ಥಾನ್ ರಾಯಲ್ಸ್ ತಂಡದ ವೇಗಿ ಚೇತನ್ ಸಕಾರಿಯಾ ಅವರ ತಂದೆ ಕೋವಿಡ್ 19 ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ರಾಜಸ್ಥಾನ್ ರಾಯಲ್ಸ್ ತಂಡ ಟ್ವೀಟ್ ಮೂಲಕ ಭಾನುವಾರ ತಿಳಿಸಿದೆ.
ಕಾಂಜಿಭಾಯ್ ಸಕಾರಿಯಾ ಅವರು ಇಂದು ಕೋವಿಡ್ -19 ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಹೇಳಲು ನಮಗೆ ತುಂಬಾ ದುಃಖವಾಗುತ್ತಿದೆ. ನಾವು ಚೇತನ್ ಅವರೊಂದಿಗೆ ಸಂಪರ್ಕದಲ್ಲಿದ್ದೇವೆ ಮತ್ತು ಈ ಕಷ್ಟದ ಸಮಯದಲ್ಲಿ ಅವರಿಗೆ ಮತ್ತು ಅವರ ಕುಟುಂಬಕ್ಕೆ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುತ್ತೇವೆ ಎಂದು ರಾಜಸ್ಥಾನ್ ರಾಯಲ್ಸ್ ತಂಡ ಟ್ವೀಟ್ ಮಾಡಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.