ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ಎರಡು ವಾರಗಳ ರಾಜ್ಯ ಸರಕಾರ ಜಾರಿಗೆ ತಂದಿರುವ ಲಾಕ್ಡೌನ್ ಸೋಮವಾರದಿಂದ ಜಾರಿಯಾಗಿದ್ದು ಈ ಹಿನ್ನೆಲೆಯಲ್ಲಿ ತಲಪಾಡಿ ಕೆ ಸಿ ರೋಡ್ ನಲ್ಲಿ ಅಗತ್ಯವಸ್ತುಗಳ ಖರೀದಿಗೆ ಜನರು ಮಾರುಕಟ್ಟೆಗಳಿಗೆ ಮುಗಿಬಿದ್ದರು. ಖರೀದಿ ಭರಾಟೆಯಲ್ಲಿ ಕೋವಿಡ್ ನಿಯಮಾವಳಿಗಳನ್ನು ಗಾಳಿಗೆ ತೂರಿದ ಹಿನ್ನೆಲೆಯಲ್ಲಿ ಮಾರುಕಟ್ಟೆಗಳೇ ಕೊರೋನಾ ಹಾಟ್ಸ್ಪಾಟ್ಗಳಾಗುವ ಆತಂಕ ಎದುರಾಗಿದೆ.
ಲಾಕ್ಡೌನ್ಗೂ ಮುನ್ನ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಮಾಸ್ಕ್ ಹಾಕಬೇಕೆನ್ನುವ ನಿಯಮಗಳಿಗೆ ಜನ ಕ್ಯಾರೇ ಅನ್ನಲಿಲ್ಲ. ಮಾರುಕಟ್ಟೆಯನ್ನು ಸಂಪರ್ಕಿಸುವ ರಸ್ತೆಗಳಂತೂ ವಾಹನಗಳು ಹಾಗೂ ಜನಜಂಗುಳಿಯಿಂದ ಗಿಜಗುಡುತ್ತಿತ್ತು. ಜನರನ್ನು ನಿಯಂತ್ರಿಸಲು ಪೊಲೀಸರು ಹರ ಸಾಹಸ ಪಡುತ್ತಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.