ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ದಕ್ಷಿಣಕನ್ನಡಜಿಲ್ಲೆಯ ವೆನ್ಲಾಕ್ಆಸ್ಪತ್ರೆಯಲ್ಲಿ ಕೋವಿಡ್-19 ಸೋಂಕಿನಿಂದ ಮಹಿಳೆಯೊಬ್ಬರು ಮೃತರಾದ ಹಿನ್ನೆಲೆಯಲ್ಲಿ ಮೃತ ಮಹಿಳೆಯ ಕುಟುಂಬದವರು, ಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳ ಮೇಲೆ ಕರ್ತವ್ಯ ನಿರ್ಲಕ್ಷ್ಯ ಆರೋಪ ವರಿಸಿದ್ದು, ಈ ಪ್ರಕರಣದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸೂಚನೆ ನೀಡಿ ಸದರಿ ಪ್ರಕರಣದಕುರಿತು ಸಮಗ್ರ ವರದಿಯನ್ನು ನೀಡುವಂತೆ ತಿಳಿಸಿರುತ್ತಾರೆ.
ವರದಿ ಬಂದ ನಂತರ ನಿರ್ಲಕ್ಷ್ಯ ವಹಿಸಿರುವುದು ಕಂಡುಬಂದಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿರುತ್ತಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.