(www.vknews.com) : ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಮೇ 2 ರ ರಾತ್ರಿ ಆಕ್ಸೀಜನ್ ಪೊರೈಕೆ ಕೊರತೆಯಿಂದ ನಡೆದ ಘಟನೆಯನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಿ ಸಾವಿಗೀಡಾಗಿದವರ ಕುಟುಂಬಸ್ಥರಿಗೆ ಪರಿಹಾರ ನೀಡ ಬೇಕು ಎಂದು ಆಗ್ರಹಿಸಿ, ಅದೇ ದಿನ ಜಿಲ್ಲಾ ಆಸ್ಪತ್ರೆಯ ಮುಂಭಾಗ ಎಸ್.ಡಿ.ಪಿ.ಐ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಇತ್ತೀಚೆಗೆ ನ್ಯಾಯಾಂಗ ತನಿಖಾ ಸಮಿತಿ ತನ್ನ ವರದಿಯಲ್ಲಿ ಘಟನೆಗೆ ಆಕ್ಸೀಜನ್ ಕೊರತೆಯೇ ಪ್ರಮುಖ ಕಾರಣ ಎಂದು ಉಲ್ಲೇಖಿಸಿದೆ.
ಅಲ್ಲದೇ ಮುಂಚಿತವಾಗಿ ಅಗತ್ಯಕ್ಕೆ ಅನುಸಾರವಾಗಿ ಜಿಲ್ಲಾಡಳಿತ ಆಕ್ಸೀಜನ್ ತರಿಸುವುದರಲ್ಲಿ ವಿಫಲವಾಗಿದೆ. ಘಟನೆಯ ನಂತರ ದಾಖಲೆಗಳನ್ನು ತಿರುಚಲಾಗಿದೆ ಎಂದು ಗಂಭೀರವಾದ ಅಂಶವನ್ನು ವರದಿಯಲ್ಲಿ ವಿವರಿಸಲಾಗಿದೆ. ಬಹಳ ಮುಖ್ಯವಾಗಿ ಜಿಲ್ಲಾಧಿಕಾರಿಗಳ ಕಾರ್ಯ ವೈಖರಿ ಕುರಿತು ಸಂದರ್ಭಕ್ಕೆ ತಕ್ಕಂತೆ ನಾಯಕತ್ವ ಮತ್ತು ಕ್ರಿಯಾಶೀಲತೆ ತೋರಿಸುವಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿಗಳು ವಿಫಲರಾಗಿದ್ದಾರೆ ಎಂದು ವರದಿಯಲ್ಲಿ ಒತ್ತಿ ಹೇಳಲಾಗಿದೆ. ಸರ್ಕಾರವೇ ನೇಮಿಸಿದ ತನಿಖಾ ಸಮಿತಿ ವರದಿ ನೀಡಿ 3-4 ದಿನಗಳು ಕಳೆದಿದ್ದರು ಸಹ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಕ್ರಮ ಇರಲಿ ನೈತಿಕ ಹೊಣೆ ಹೊತ್ತು ಜಿಲ್ಲಾ ಉಸ್ತುವಾರಿ ಸಚಿವರು ಸಹ ರಾಜೀನಾಮೆ ನೀಡಿಲ್ಲ, ಸಂತ್ರಸ್ತರಿಗೆ ಸರ್ಕಾರ ಪರಿಹಾರ ಸಹ ಘೋಷಣೆ ಮಾಡಿಲ್ಲದಿರುವುದು ಅತ್ಯಂತ ಅವಮಾನವೀಯವಾದದು ಎಂದು ಎಸ್.ಡಿ.ಪಿ.ಐ ರಾಜ್ಯ ಕಾರ್ಯದರ್ಶಿ ಅಬ್ರಾರ್ ಆಹಮದ್ ಮಾರ್ಮಿಕವಾಗಿ ನುಡಿದಿದ್ದಾರೆ. ಸರ್ಕಾರ ತನ್ನ ಮೌನವನ್ನು ಮುರಿದು ಜಿಲ್ಲಾ ಉಸ್ತುವಾರಿ ಸಚಿವರ ರಾಜೀನಾಮೆ ಪಡೆಯ ಬೇಕು ಹಾಗೂ ನ್ಯಾಯಾಂಗ ತನಿಖಾ ಸಮಿತಿ ನೀಡಿರುವ ಶಿಫಾರಸ್ಸುಗಳನ್ನು ಜಾರಿಗೆ ತರ ಬೇಕು ಎಂದು ಈ ಸುದ್ದಿಗೋಷ್ಠಿಯ ಮೂಲಕ ಸರ್ಕಾರವನ್ನು ಒತ್ತಾಯಿಸುತ್ತಿದ್ದೇವೆ.
ಈ ಅನ್ಯಾಯದ ವಿರುದ್ಧ ಎಸ್.ಡಿ.ಪಿ.ಐ ತನ್ನ ಹೋರಾಟ ಮುಂದುವರಿಸಲಿದೆ. ಇಂದಿನ ಈ ಸುದ್ದಿಗೋಷ್ಠಿ ಹೋರಾಟದ ಮುಂದುವರಿದ ಭಾಗವಾಗಿದ್ದು, ಸರ್ಕಾರ ಎಚ್ಚೆತ್ತು ಕೊಂಡು ತಕ್ಷಣ ಸಕರತ್ಮಾಕ್ಕವಾಗಿ ಸ್ಪಂದಿಸಲಿಲ್ಲ ಎಂದರೆ ಖಂಡಿತವಾಗಿಯೂ ನಮ್ಮ ಪಕ್ಷದ ವತಿಯಿಂದ ನಿರಂತರವಾಗಿ ವಿವಿಧ ಮಾದರಿಯ ಹೋರಾಟಗಳನ್ನು ಮಾಡಲಿದ್ದೇವೆ ಎಂದು ಸರ್ಕಾರಕ್ಕೆ ಎಚ್ಚರ ನೀಡುತ್ತಿದ್ದೇವೆ.
ಧನ್ಯವಾದಗಳೊಂದಿಗೆ
ಸುದ್ದಿ ಗೋಷ್ಠಿಯಲ್ಲಿ ಉಪಸ್ಥಿತಿರಿದ್ದವರು:- ▪️ಕಲೀಲ್ ಉಲ್ಲಾ, ಜಿಲ್ಲಾಧ್ಯಕ್ಷರು ▪️ಸೈಯದ್ ಆರೀಫ್ C.S, ಜಿಲ್ಲಾ ಉಪಾಧ್ಯಕ್ಷರು ▪️ಮಹೇಶ್. ಎಂ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ▪️ಜಬೀ ನೂರ್, ಜಿಲ್ಲಾ ಕಾರ್ಯದರ್ಶಿ
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.