ಬೆಂಗಳೂರು (www.vknews.com) : ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಸಾಮಾಜಿಕ ಕಾರ್ಯಕರ್ತ, 104 ವರ್ಷ ವಯಸ್ಸಿನ ಎಚ್. ಎಸ್. ದೊರೆಸ್ವಾಮಿ ಅವರು ಇಂದು ಹೃದಯಘಾತದಿಂದ ನಿಧನರಾಗಿದ್ದಾರೆ.
1918ರಲ್ಲಿ ಜನಿಸಿದ್ದ ಎಚ್.ಎಸ್. ದೊರೆಸ್ವಾಮಿ ಅವರು ಸ್ವಾತಂತ್ರ ಹೋರಾಟದಲ್ಲಿ ಗುರುತಿಸಿಕೊಂಡು ಹಿರಿಯ ಹೋರಾಟಗಾರರೆನಿಸಿಕೊಂಡಿದ್ದರು. ಇತ್ತೀಚೆಗೆ ತಾನೆ ಕೊರೊನಾ ಸೋಂಕಿಗೆ ಒಳಗಾಗಿದ್ದ ಅವರು ಚೇತರಿಸಿಕೊಂಡಿದ್ದರು. ಅದರ ನಂತರ ಉಸಿರಾಟದ ತೊಂದರೆಯಿಂದಾಗಿ ಚಿಕಿತ್ಸೆಗೆ ಜಯದೇವ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ಇಂದು ಹೃಧಯಾಘಾತದಿಂದ ಮೃತಪಟ್ಟಿದ್ದಾರೆ.
ಅವರ ಅಗಲಿಕೆಗೆ ರಾಜಕೀಯ ನಾಯಕರು ಸೇರಿದಂತೆ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ. ಅಂತಿಮ ಸಂಸ್ಕಾರಕ್ಕೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲೂ ಸಿದ್ದತೆ ಮಾಡಲಾಗುತ್ತಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.