ಶ್ರೀನಿವಾಸಪುರ (www.vknews.com):ಗ್ರಾಮೀಣ ಪ್ರದೇಶದ ನಾಗಕರಿಕರು ಕೊರೊನಾ ಸೋಂಕು ತಡೆಯಲು ಸಹಕರಿಸಬೇಕು. ಪ್ರತಿಯೊಬ್ಬರೂ ಕೋವಿಡ್ ನಿಯಗಳನ್ನು ತಪ್ಪದೆ ಪಾಲಿಸಬೇಕು ಎಂದು ಗ್ರಾಮ ಪಂಚಾಯಿತಿ ಸದಸ್ಯ ಎಚ್.ಎಂ.ಆನಂದ್ ಕುಮಾರ್ ಹೇಳಿದರು.
ತಾಲ್ಲೂಕಿನ ಚಲ್ಲಿಗಾನಹಳ್ಳಿ ಗ್ರಾಮದ ಗ್ರಾಮ ಪಂಚಾಯತಿ ಕಚೇರಿ ಮುಂದೆ ಬುಧವಾರ ತಾಲ್ಲೂಕು ಯುವ ಕಾಂಗ್ರೆಸ್ ವತಿಯಿಂದ ಏರ್ಪಡಿಸಿದ್ದ ಸಮಾರಂಭದಲ್ಲಿ ಕೊರೊನಾ ಜಾಗೃತಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು , ಈಗ ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಆರ್ಭಟ ಹೆಚ್ಚಾಗಿದೆ. ಅದಕ್ಕೆ ಜನರ ನಿರ್ಲಕ್ಷವೇ ಪ್ರಮುಖ ಕಾರಣವಾಗಿದೆ ಎಂದು ಹೇಳಿದರು .
ಕೊರೊನಾ ಜಾಗೃತಿ ವಾಹನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗು ತೆರಳಿ ಜನರಲ್ಲಿ ಜಾಗೃತಿ ಮೂಡಿಸಲಾಗುವುದು. ವಾಹನ ಗ್ರಾಮಕ್ಕೆ ಆಗಮಿಸಿದಾಗ ಗ್ರಾಮ ವಾಸಿಗಳು ಸಹಕರಿಸಬೇಕು ಕೊರೊನಾ ಸೋಂಕು ತಡೆ ಕುರಿತು ಆರೋಗ್ಯ ಕಾರ್ಯಕರ್ತರು ಹೇಳುವ ಸಲಹೆ ಸೂಚನೆಗಳನ್ನು ಪಾಲಿಸಬೇಕು ಕೊರೊನಾ ನಿರ್ಮೂಲನೆಗೆ ಪಣತೊಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಗೋಪಾಲರೆಡ್ಡಿ , ರಾಮಮೂರ್ತಿ , ಪಟೇಲ್ಸ್ ನಾರಾಯಣಸ್ವಾಮಿ , ಶ್ರೀರಾಮರೆಡ್ಡಿ , ಪ್ರಭಾಕರಗೌಡ , ವೆಂಕಟರವಣಪ್ಪ , ಸುರೇಶ್ ಕುಮಾರ್ ಇದ್ದರು. ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.