ಚಿಕ್ಕಬಳ್ಳಾಪುರ,(ವಿಶ್ವಕನ್ನಡಿಗ ನ್ಯೂಸ್): ಚಿಕ್ಕಬಳ್ಳಾಪುರ ನಗರಸಭೆಯ ವ್ಯಾಪ್ತಿಯಲ್ಲಿ ವಿವಿಧ ವಾರ್ಡ್ ಗಳಿಗೆ ಭೇಟಿ ನೀಡಿ ಹೋಂ ಐಸೋಲೇಷನ್ ನಲ್ಲಿರುವ ಕೊರೊನಾ ಸೋಂಕಿತರ ಕುಂದುಕೊರತೆಗಳು ಮತ್ತು ಅಹವಾಲುಗಳನ್ನು ಆಲಿಸಿದ ನಗರಸಭೆಯ ಅಧ್ಯಕ್ಷ ಡಿ.ಎಸ್. ಆನಂದರೆಡ್ಡಿ(ಬಾಬು) ಅವರು ನಗರದ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ಸೋಂಕಿತರ ಯೋಗಕ್ಷೇಮ ವಿಚಾರಿಸಿದ್ದಾರೆ.
ನಗರದ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿದ ನಗರಸಭೆ ಅಧ್ಯಕ್ಷರು ಆಸ್ಪತ್ರೆಯಲ್ಲಿ ಸೋಂಕಿತರಿಗೆ ಯಾವ ರೀತಿಯ ಚಿಕಿತ್ಸೆಗಳನ್ನು ನೀಡುತ್ತಿದ್ದಾರೆ ಎಂದು ಸ್ವತಃ ರೋಗಿಗಳನ್ನು ವಿಚಾರಿಸಿ ವೈದ್ಯರು ನೀಡುವ ಸಲಹೆ ಸೂಚನೆಗಳನ್ನು ಪಾಲಿಸುವ ಮೂಲಕ ಶೀಘ್ರವಾಗಿ ಗುಣಮುಖರಾಗಿ ಬೇಕೆಂದು ರೋಗಿಗಳಿಗೆ ಧೈರ್ಯ ತುಂಬಿಸಿದರು.
ನಗರಸಭೆಯ ಅಧ್ಯಕ್ಷ ಡಿ.ಎಸ್. ಆನಂದರೆಡ್ಡಿ(ಬಾಬು) ಮಾತನಾಡಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರು ಕೈಗೊಂಡಿರುವ ಐತಿಹಾಸಿಕ ಕ್ರಮಗಳಿಂದ ಜಿಲ್ಲೆಯ ಜನರಿಗೆ ಅನುಕೂಲವಾಗಿದ್ದು ವಿಶೇಷವಾಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಮತ್ತು ಜಿಲ್ಲೆಯ ಜನರಿಗೆ ಅತ್ಯುತ್ತಮವಾಗಿ ಚಿಕಿತ್ಸೆ ಕಲ್ಪಿಸಬೇಕೆಂಬ ಉದ್ದೇಶದಿಂದ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಶೇಕಡಾ 15ರಷ್ಟು ಹಾಸಿಗೆಗಳನ್ನು ಮೀಸಲಿಟ್ಟಿದ್ದರಿಂದ ಬಹಳ ಅನುಕೂಲವಾಗಿದೆ ಜಿಲ್ಲಾ ಉಸ್ತುವಾರಿ ಸಚಿವರಾಗಿ ನಮಗೆ ಸಿಕ್ಕಿರೋದು ಒಂದು ರೀತಿಯ ದೇವರ ಕೊಡುಗೆ ಎಂದು ಬಣ್ಣಿಸಿದರು.
ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಜಿಲ್ಲಾಡಳಿತ ಸಂಪೂರ್ಣ ಲಾಕ್ಡೌನ್ ಘೋಷಣೆ ಮಾಡಿದೆ ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರಬರುವುದನ್ನು ಸ್ವಯಂ ನಿರ್ಬಂಧಿಸಿಕೊಂಡು ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಸೋಂಕಿನಿಂದ ಮಾಡಲು ಸಹಕರಿಸಬೇಕೆಂದು ಮನವಿ ಮಾಡಿದರು. ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿರುವ ಸೋಂಕಿತರಿಗೆ ಔಷಧಿ ಮತ್ತು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸ್ವತಃ ರೋಗಿಗಳು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ ಲಾಕ್ಡೌನ್ ಗೋಷಣೆ ಆದ ಬಳಿಕ ಸೋಂಕಿನ ಪ್ರಮಾಣ ಸಹ ಕಡಿಮೆಯಾಗುತ್ತಿದ್ದು ಸಾರ್ವಜನಿಕರು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಸಹಕರಿಸಬೇಕೆಂದು ವಿನಂತಿಸಿದರು.
ಈ ಸಂದರ್ಭದಲ್ಲಿ ಸಮಾಜ ಸೇವಕ ಮಹಾಕಾಳಿ ಬಾಬು, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರಮೇಶ್, ಕೋವಿಡ್ ಆಸ್ಪತ್ರೆಯ ಡಾ. ವಿಜಯ,ನಗರಸಭಾ ಸದಸ್ಯರಾದ ನಾಗರಾಜ್,ಮಂಜುನಾಥ್ಚಾರಿ ಮತ್ತಿತರರು ಉಪಸ್ಥಿತರಿದ್ದರು.
ವರದಿ: ತೇ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.