ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್): ಜಿಲ್ಲೆಯ ಶಿಡ್ಲಘಟ್ಟ ನಗರದಲ್ಲಿ ಲಾಕ್ಡೌನ್ ಯಶಸ್ವಿಗೊಳಿಸಲು ತಹಶೀಲ್ದಾರ್ ಬಿ.ಎಸ್.ರಾಜೀವ್ ಅವರು ಯಾರಿಗೂ ಗೊತ್ತಾಗದಂತೆ ನಗರದಲ್ಲಿ ಏಕಾಂಗಿಯಾಗಿ ಸಂಚರಿಸಿ ವ್ಯವಸ್ಥೆಗಳನ್ನು ಪರಿಶೀಲಿಸಿದ್ದಾರೆ ತಾಲೂಕು ಕಚೇರಿಯಿಂದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ತಾಲೂಕು ದಂಡಾಧಿಕಾರಿಗಳು ನಗರಸಭೆಯ ಪೌರಕಾರ್ಮಿಕರು ಹೇಗೆ ಸ್ವಚ್ಛತೆಯನ್ನು ಕಾಪಾಡಿಕೊಂಡಿದ್ದಾರೆ ಲಾಕ್ಡೌನ್ ಆದೇಶ ಜಾರಿಯಿದ್ದರು ಯಾರು ಕದ್ದುಮುಚ್ಚಿ ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ ಎಂದು ಪರಿಶೀಲಿಸಿದ್ದಾರೆ.
ನಗರದಲ್ಲಿ ಯಾವುದೇ ರೀತಿಯ ವಾಹನ ಸೌಲಭ್ಯವನ್ನು ಪಡೆದುಕೊಳ್ಳದೇ ಕಾಲ್ನಡಿಗೆಯಲ್ಲಿ ಸಂಚರಿಸಿ ಶಾಕ್ ನೀಡಿದ್ದಾರೆ ಜೊತೆಗೆ ಇಂದಿರಾ ಕ್ಯಾಂಟೀನ್ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದ್ದಾರೆ ಬೆಳಿಗಿನ ಉಪಹಾರ ಸಿದ್ದಪಡಿಸುತ್ತಿದ್ದನ್ನು ವೀಕ್ಷಣೆ ಮಾಡಿ ಕ್ಯಾಂಟೀನ್ನಲ್ಲಿ ಸ್ವಚ್ಛತೆ ಕಾಪಾಡಲು ಸೂಚನೆ ನೀಡಿದ್ದಾರೆ ನಗರದಲ್ಲಿ ಲಾಕ್ಡೌನ್ ಜಾರಿಯಿದ್ದರು ವಾಹನಗಳನ್ನು ಸಂಚರಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ್ದು ಈ ಸಂಬಂಧ ಆರಕ್ಷಕ ವೃತ್ತ ನಿರೀಕ್ಷಕರು ಮತ್ತು ಉಪ ನಿರೀಕ್ಷಕರೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ಕ್ರಮ ಜರುಗಿಸುತ್ತೇನೆ ಎಂದು ತಹಶೀಲ್ದಾರ್ ಭರವಸೆ ನೀಡಿದ್ದಾರೆ.
ಇಸ್ಕಾನ್ನಿಂದ ಫುಡ್ಕಿಟ್: ಬೆಂಗಳೂರಿನ ಇಸ್ಕಾನ್ನಿಂದ ಬಂದಿರುವ ಫುಡ್ಕಿಟ್ಗಳನ್ನು ಜಿಲ್ಲಾಧಿಕಾರಿಗಳ ಸಲಹೆ ಮತ್ತು ಸೂಚನೆಯನ್ನು ಆಧರಿಸಿ ನಗರಸಭೆಯ ಪೌರಾಯುಕ್ತ ಶ್ರೀನಿವಾಸ್ ಅವರೊಂದಿಗೆ ಶಿಡ್ಲಘಟ್ಟ ನಗರದ ವಿವಿಧ ವಾರ್ಡ್ಗಳಿಗೆ ಭೇಟಿ ನೀಡಿ ವಿಕಲಚೇತನರು,ಸುಲುಭ ಶೌಚಾಲಯದಲ್ಲಿ ಕೆಲಸ ಮಾಡುವ ಕಾರ್ಮಿಕರು ಹಾಗೂ ಡಿಯಾಲಿಸಿಸ್ ರೋಗಿಗಳಿಗೆ ಫುಡ್ಕಿಟ್ಗಳನ್ನು ವಿತರಿಸಿದ್ದಾರೆ ಇದಕ್ಕೆ ಕಂದಾಯ ಇಲಾಖೆ ಮತ್ತು ನಗರಸಭೆಯ ಸಿಬ್ಬಂದಿ ಸಾಥ್ ನೀಡಿದ್ದಾರೆ.
ವರದಿ: ತೇ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.