ಶ್ರೀನಿವಾಸಪುರ(www.vknews.com):- ಪುರಸಭೆಯ ಮುಖ್ಯಾಧಿಕಾರಿ ಡಿ ಶೇಖರ್ ರೆಡ್ಡಿ ಅವರ ಮಾರ್ಗದರ್ಶನದಂತೆ ಪಟ್ಟಣದ ಇಂದಿರಾ ಕ್ಯಾಂಟೀನ್ಗೆ ಶನಿವಾರ ಪುರಸಭೆಯ ಅಧಿಕಾರಿಗಳು ಭೇಟಿ ನೀಡಿ ಆಹಾರದ ಗುಣಮಟ್ಟ ಪರಿಶೀಲಿಸಿದರು. ಲಾಕ್ ಡೌನ್ ಸಂದರ್ಭದಲ್ಲಿ ಆಹಾರ ಪ್ರತಿದಿನ ಭಿಕ್ಷುಕರು ನಿರ್ಗತಿಕರು ಹಾಗೂ ಅಗತ್ಯ ಇರುವ ವ್ಯಕ್ತಿಗಳಿಗೆ ಉಚಿತವಾಗಿ ಊಟದ ವ್ಯವಸ್ಥೆ ಮಾಡಲಾಗಿದೆ. ಹಸಿದವರು ಇಂದಿರಾ ಕ್ಯಾಂಟೀನ್ ಕಡೆ ನೋಡುವಂತಾಗಿದೆ. ಅದ್ದರಿಂದ ಇಂದಿರಾ ಕ್ಯಾಂಟೀನ್ ಸಿಬ್ಬಂದಿ ಆಹಾರ ತಯಾರಿಸುವಾಗ ಸ್ವಚ್ಛತೆ ಹಾಗೂ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು ಎಂದು ಪುರಸಭೆಯ ಸಮುದಾಯ ಸಂಘಟನಾಧಿಕಾರಿ ಕೆ.ಎನ್ ರಜೇಶ್ವರಿ ಹೇಳಿದರು. ಕಿರಿಯ ಆರೋಗ್ಯ ನಿರೀಕ್ಷಕ ಎಂ ಪೃಥ್ವಿರಾಜ್ , ಕಂದಾಯ ನಿರೀಕ್ಷಕ ಎನ್ ಶಂಕರ್ , ಕಂದಾಯ ವಸೂಲಿಗಾರರಾದ ಎಸ್ ಪ್ರತಾಪ್ , ವೆಂಕಟೇಶಯ್ಯ ಇದ್ದರು.
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.