ಕೋಲಾರ(www.vknews.com):- ಕೋವಿಡ್ -19 ಗೆ ತುತ್ತಾಗಿರುವ ರೋಗಿಗಳು ಆತಂಕ ಪಡದೆ ವೈದ್ಯರುಗಳ ಸಲಹೆಯಂತೆ ಔಷಧಿಗಳನ್ನು ಪಡೆಯಬೇಕೆಂದು ಹಾಗೂ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಯುಷ್ ಔಷಧಿಗಳನ್ನು ಸಹ ಸೇವಿಸಿ ಶೀಘ್ರವಾಗಿ ಗುಣಮುಖರಾಗಬೇಕೆಂದು ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಸ್. ಮುನಿಸ್ವಾಮಿ ಅವರು ಸಲಹೆ ನೀಡಿದರು. ಇಂದು ಕೋಲಾರ ಜಿಲ್ಲಾ ಆಯುಷ್ ಕಛೇರಿ ವತಿಯಿಂದ ಹಮ್ಮಿಕೊಂಡಿದ್ದ ಕೋಲಾರ ತಾಲ್ಲೂಕಿನ ಮಂಗಸಂದ್ರ ಗ್ರಾಮದಲ್ಲಿರುವ ಕೋವಿಡ್ ಕೇರ್ ಸೆಂಟರ್ನಲ್ಲಿರುವ ರೋಗಿಗಳಿಗೆ ರಾಷ್ಟ್ರೀಯ ಆಯುಷ್ ಅಭಿಯಾನದಡಿ ಸರಬರಾಜಾಗಿದ್ದ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಯುಷ್ ಔಷಧಿಗಳನ್ನು ವಿತರಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾ| ರಾಘವೇಂದ್ರ ಶೆಟ್ಟಿಗಾರ್ ಅವರು ಮಾತನಾಡಿ, ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಯುಷ್ ಔಷಧಿಗಳ ಸೇವನೆಯಿಂದ ಯಾವುದೇ ರೀತಿಯ ಅಡ್ಡಪರಿಣಾಮ ಉಂಟಾಗುವುದಿಲ್ಲ ಹಾಗೂ ಇದರಿಂದ ರೋಗನಿರೋಧಕ ಶಕ್ತಿ ವೃದ್ಧಿಸುತ್ತದೆ ಎಂದು ಸೋಂಕಿತರಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಸಹಾಯಕ ಆಡಳಿತಾಧಿಕಾರಿಗಳಾದ ಎಂ. ನಾಗಲಕ್ಷ್ಮಿ,ಆಯುಷ್ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹಾಜರಾಗಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.