ಕೋಲಾರ(www.vknews.com):-ಜಿಲ್ಲೆಯಲ್ಲಿ ಕರೋನಾ ನಿಯಂತ್ರಿಸಲು ಮತ್ತೆ ಜೂನ್ 5 ಶನಿವಾರ ಬೆಳಿಗ್ಗೆ 10.00 ಗಂಟೆಯಿಂದ ಜೂನ್ 07 ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ಡೌನ್ ಮಾಡಲಾಗುತ್ತದೆ ಸಾರ್ವಜನಿಕರು ಸಹಕರಿಸಬೇಕು ಎಂದು ಅರಣ್ಯ , ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಅರವಿಂದ ಲಿಂಬಾವಳಿ ತಿಳಿಸಿದರು. ಇಂದು ಎಸ್.ಎನ್.ಆರ್ ಜಿಲ್ಲಾ ಆಸ್ಪತ್ರೆಯಲ್ಲಿ 6.5 ಕೆ.ಎಲ್ ಆಕ್ಸಿಜನ್ ಪೂರೈಕೆ ಘಟಕವನ್ನು ಅವರು ಉದ್ಘಾಟಿಸಿದ ನಂತರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ , ಐ.ಸಿ.ಯು. ಯೂನಿಟ್ಗೆ ಪೂರೈಕೆಯಾಗುತ್ತಿದ್ದ ಆಕ್ಸಿಜನ್ನ ಒತ್ತಡ ಕಡಿಮೆ ಇತ್ತು . ಚೈಲ್ಡ್ ಕೇರ್ ವಾರ್ಡ್ಗೆ ಬೇಕಾಗುವ ಆಕ್ಸಿಜನ್ ಪೂರೈಸುವುದಕ್ಕೆ ಆಸ್ಪತ್ರೆಯಲ್ಲಿ 6.5 ಕೆ.ಎಲ್ ಆಕ್ಸಿಜನ್ ಟ್ಯಾಂಕ್ ಅಳವಡಿಸಿರುವುದರಿಂದ ಅನುಕೂಲವಾಗುತ್ತದೆ ಎಂದು ಅವರು ತಿಳಿಸಿದರು. ಜಿಲ್ಲೆಯಲ್ಲಿ ಜನಪ್ರತಿನಿಧಿಗಳು , ಆತ ಹಾಗೂ ಸಾರ್ವಜನಿಕರ ಸಹಕಾರದಿಂದ ಕೋಡ್ ನಿಯಂತ್ರಣಕ್ಕೆ ಬಂದಿದೆ. ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಶುಕ್ರವಾರದವರೆಗೆ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ವಾಣಿಜ್ಯ ವಹಿವಾಟು ನಡೆಸಲು ಅನುಮತಿ ಇದೆ ಜಿಲ್ಲೆಯಲ್ಲಿ ಎರಡು ಬಾರಿ ಸಂಪೂರ್ಣ ಲಾಕ್ಡೌನ್ ಮಾಡಿದ್ದರಿಂದ ಕರೋನಾ ನಿಯಂತ್ರಣಕ್ಕೆ ಬಂದಿದೆ . ಆದ್ದರಿಂದ ಮತ್ತೆ ಎರಡು ದಿನ ಸಂಪೂರ್ಣ ಲಾಕ್ಡೌನ್ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು .
ಗ್ರಾಮಗಳಲ್ಲಿ ಟಾಸ್ಕ್ ಫೋರ್ಸ್ಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ ಜಿಲ್ಲೆಯಲ್ಲಿ ಅನೇಕ ಗ್ರಾಮಗಳು ಕರೋನಾ ಮುಕ್ತವಾಗಿವೆ ಒಂದು ತಿಂಗಳವರೆಗೆ ಒಂದು ಕರೋನಾ ಪ್ರಕರಣ ಇಲ್ಲದೆ ಇರುವ ಹಾಗೆ ಕ್ರಮವಹಿಸಿದ ಗ್ರಾಮ ಪಂಚಾಯಿತಿಗೆ ಜಿಲ್ಲಾಡಳಿತ ವತಿಯಿಂದ ಪ್ರೋತ್ಸಾಹ ಧನ ನೀಡಲಾಗುತ್ತದೆ. ಟಾಸ್ಕ್ ಫೋರ್ಸ್ಗಳು ಕರೋನಾ ನಿಯಂತ್ರಿಸಲು ವಿಶೇಷ ಪ್ರಯತ್ನ ಮಾಡಬೇಕು ಎಂದು ಅವರು ತಿಳಿಸಿದರು . ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ 5 ಆಕ್ಸಿಜನ್ ಕಾನ್ಸನ್ಟ್ರೇಟರ್ ಜಿಲ್ಲಾ ಎಸ್.ಎನ್.ಆರ್ . ಆಸ್ಪತ್ರೆಗೆ ನೀಡಿದರು. . ಈ ಸಂದರ್ಭದಲ್ಲಿ ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಸ್.ಮುನಿಸ್ವಾಮಿ , ವಿಧಾನ ಪರಿಷತ್ ಸದಸ್ಯರಾದ ವೈ.ಎ. ನಾರಾಯಣಸ್ವಾಮಿ , ಜಿಲ್ಲಾಧಿಕಾರಿಗಳಾದ ಡಾ || ಆರ್ . ಸೆಲ್ವಮಣಿ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಎನ್.ಎಂ.ನಾಗರಾಜ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಕಾರ್ತಿಕ್ ರೆಡ್ಡಿ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ || ಜಗದೀಶ್ , ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ | ಚಾರಿಣಿ , ವಿಜಯಕುಮಾರಿ , ಪೌರಾಯುಕ್ತರಾದ ಆರ್.ಶ್ರೀಕಾಂತ್ , ತಹಶೀಲ್ದಾರ್ ಶೋಭಿತ , ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.