ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್) ಸಮಾಜದಲ್ಲಿರುವ ಪ್ರತಿಯೊಬ್ಬರು ತಮ್ಮ ತಮ್ಮ ಮನೆಯಂಗಳ ಮತ್ತು ಸುತ್ತಮುತ್ತಲಿನ ಪರಿಸರದಲ್ಲಿ ಗಿಡಗಳನ್ನು ನೆಟ್ಟು ಪೋಷಣೆ ಮಾಡಿ ಶಿಡ್ಲಘಟ್ಟ ತಾಲೂಕು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಹಸಿರುಮಯ ಮಾಡಲು ದೃಡಸಂಕಲ್ಪ ಮಾಡಬೇಕೆಂದು ತಹಶೀಲ್ದಾರ್ ಬಿ.ಎಸ್.ರಾಜೀವ್ ಕರೆ ನೀಡಿದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಮಾತನಾಡಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಮೂಲಕ ತಾಲೂಕಿನಲ್ಲಿ ಪರಿಸರವನ್ನು ಸಂರಕ್ಷಣೆ ಮಾಡಿ ಅರಣ್ಯಿಕರಣ ಮಾಡಲು ವಿಶೇಷ ಆದ್ಯತೆ ನೀಡಲಾಗಿದೆ ಸರ್ಕಾರಿ ಜಮೀನು,ಶಾಲಾ ಕಾಲೇಜಿನ ಆವರಣ ಮತ್ತು ಖಾಲಿ ಜಾಗಗಳಲ್ಲಿ ಗಿಡಗಳನ್ನು ನೆಟ್ಟು ಪೋಷಣೆ ಮಾಡಬೇಕು ಮಜಿನರೇಗಾ ಯೋಜನೆಯ ಮೂಲಕ ವೈಯಕ್ತಿಕ ಗಿಡಗಳನ್ನು ಬೆಳೆಸಲು ಅವಕಾಶಗಳಿದ್ದು ಅದನ್ನು ಸದುಪಯೋಗ ಮಾಡಿಕೊಳ್ಳಬೇಕೆಂದು ಕರೆ ನೀಡಿದರು.
ವರದಿ: ತೇ.ಮೀಂ,ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.