ಮಂಗಳೂರು(ವಿಶ್ವ ಕನ್ನಡಿಗ ನ್ಯೂಸ್): ಎಮ್. ಆರ್. ಪಿ.ಎಲ್ ಕಂಪೆನಿಯು 233 ಹುದ್ದೆಗಳ ನೇಮಕಾತಿಯಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗಳು ಸೇರಿದಂತೆ ಕರ್ನಾಟಕ ರಾಜ್ಯದ ಅರ್ಹ ಉದ್ಯೋಕಾಂಕ್ಷಿಗಳನ್ನು ಹೊರಗಿಟ್ಟು ಮಾಡಿರುವ ವಂಚನೆಯ ವಿರುದ್ದ ನಾಡಿನ ಜನತೆ ಒಕ್ಕೊರಲ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಹಿನ್ನಲೆಯಲ್ಲಿ MRPL ಈಗ ನಡೆದಿರುವ ನೇಮಕಾತಿಯನ್ನು ರದ್ದುಗೊಳಿಸಬೇಕು, ಸಂಸದರು, ಶಾಸಕರುಗಳು ತಮ್ಮ ಮಾತನ್ನು ಉಳಿಸಿಕೊಳ್ಳಬೇಕು, ಸರೋಜಿನಿ ಮಹಿಷಿ ವರದಿಯ ಶಿಫಾರಸ್ಸುಗಳ ಅಧಾರದಲ್ಲಿ ಸ್ಥಳೀಯರಿಗೆ ಉದ್ಯೋಗಗಳನ್ನು ಒದಗಿಸಿಕೊಡಬೇಕು, ಎಲ್ಲಾ ಕೈಗಾರಿಕೆ, ಉದ್ದಿಮೆಗಳಲ್ಲಿ ಸ್ಥಳೀಯರಿಗೆ ನೇಮಕಾತಿಯಲ್ಲಿ ಪ್ರಾಧಾನ್ಯತೆ, ಸಿಂಹಪಾಲು ದೊರಕಬೇಕು ಎಂದು ಒತ್ತಾಯಿಸಿ ಜೂ.5ರಂದು ತಾಲೂಕಿನಲ್ಲಿ “ಸ್ಥಳೀಯರ ಉದ್ಯೋಗದ ಹಕ್ಕಿಗಾಗಿ” ಸಮಾನ ಮನಸ್ಕ ಸಂಘಟನೆಗಳಿಂದ “ಮನೆ ಮನೆ ಪ್ರತಿಭಟನೆ ನಡೆಯಿತು.
ಸಾಮಾಜಿಕ ಜಾಲತಾಣಗಳಲ್ಲಿ ಪಕ್ಷ ರಾಜಕಾರಣದ ಮಿತಿಗಳನ್ನು ದಾಟಿ ತುಳುನಾಡಿನ ಜನತೆ ನಡೆಸಿದ ವ್ಯಾಪಕ ಪ್ರತಿರೋಧ ಸತತವಾಗಿ ಜನಪ್ರತಿನಿಧಿಗಳು ಚುನಾವಣೆಯಲ್ಲಿ ಗೆಲ್ಲುತ್ತಾ, ಬರೀ ಭರವಸೆಯಲ್ಲೇ ಕಾಲ ತಳ್ಳುತ್ತಾ ಬರುತ್ತಿದ್ದಾರೆ ಎಂದು ಪ್ರತಿಭಟಕಾರರು ಹೇಳಿದ್ದಾರೆ.
ಸಂಸದರು, ಉಸ್ತುವಾರಿ ಸಚಿವರು, ಶಾಸಕರುಗಳು ಇದೀಗ ನಮ್ಮ ಉದ್ಯೋಗದ ಹಕ್ಕಿನ ಧ್ವನಿಯನ್ನು ಕುಗ್ಗಿಸುವ ಪ್ರಯತ್ನ ವ್ಯವಸ್ಥಿತವಾಗಿ ನಡೆಯುತ್ತಿದೆ ಎಂದು ಪ್ರತಿಭಟಕಾರು ಕಿಡಿಕಾರಿದ್ದಾರೆ.
ಬಂಟ್ವಾಳ ತಾಲೂಕಿನಾದ್ಯಂತ ವಿಟ್ಲ , ಮಂಗಳಪದವು, ಕಲಿಂಜ, ಮೇಗಿನಪೇಟೆ ,ಕೋಲ್ಪೆ, ಉಕ್ಕುಡ ಹಾಗೂ ಬಂಟ್ವಾಳ ಕೆಳಗಿನಪೇಟೆ ,ಮಂಡಾಡಿ ,ನರಿಕೊಂಬು ಮಣಿನಾಲ್ಕೂರು ಮುಂತಾದ ಕಡೆ ಮನೆ ಮನೆ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಡಿ.ವೈ.ಎಫ್.ಐ, ಎ.ಐ.ವೈ.ಎಫ್, ಸಿ.ಪಿ.ಐ.ಎಂ. ಸಿ.ಪಿ.ಐ, ಜೆ.ಡಿ.ಎಸ್, ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.