ಕೋಲಾರ(www.vknews.com):- ಕೋಲಾರ ಸಂಸದ ಎಸ್.ಮುನಿಸ್ವಾಮಿ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಕೋಲಾರ ಜಿಲ್ಲೆಯ ಟೊಮೇಟೊ ಮತ್ತು ರೇಷ್ಮೆ ಬೆಳೆಗಾರರಿಗೆ , ಪತ್ರಕರ್ತರಿಗೆ , ತಮಟೆ ಒಡೆಯುವವರಿಗೆ , ಸಾಂಸ್ಕೃತಿಕ ಕಲಾ ತಂಡಗಳಿಗೆ , ಕಲ್ಲು ಕುಟುಕುವ ಕಾರ್ಮಿಕರಿಗೆ ಸಹಾಯಧನ ನೀಡಲು ಮನವಿ ಮಾಡಿದರು.
ಕೋಲಾರ ಜಿಲ್ಲೆಯಲ್ಲಿ ಸುಮಾರು 42 ಬ್ಲಾಕ್ ಫಂಗಸ್ ಕೇಸ್ಗಳು ಕಂಡುಬಂದಿದ್ದು , ಇದರ ಚಿಕಿತ್ಸೆಗಾಗಿ ಬೇಕಾದ ಔಷಧ ಮತ್ತು ಇಂಜೆಕ್ಷನ್ಗಳ ಕೊರತೆ ಇರುವುದನ್ನು ಮುಖ್ಯ ಮಂತ್ರಿಗಳ ಗಮನಕ್ಕೆ ತಂದರು. ಮುಖ್ಯಮಂತ್ರಿಗಳು ಸ್ಥಳದಲ್ಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಕರೆ ಮಾಡಿ ಸೂಕ್ತ ವ್ಯವಸ್ಥೆ ಮಾಡಲು ಸೂಚಿಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷರು ಡಾ ವೇಣುಗೋಪಾಲ್ , ಜಿಲ್ಲಾ ಉಪಾಧ್ಯಕ್ಷ ಹಾಗೂ ಜಿಪಂ ಸದಸ್ಯ ಬಿ.ವಿ.ಮಹೇಶ್ , ಜಯಪ್ರಕಾಶ್ ನಾಯ್ತು ,ಶ್ರೀನಿವಾಸಗೌಡ ಮುಂತಾದವರು ಹಾಜರಿದ್ದರು. ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.