ಶ್ರೀನಿವಾಸಪುರ(www.vknews.com) :- ಕೋವಿಡ್ ವಿರುದ್ಧ ಲಸಿಕೆ ನೀಡಲು ಪುರಸಭಾ ಸದಸ್ಯರು ಸಹಕರಿಸಬೇಕು ಅರ್ಹ ವ್ಯಕ್ತಿಗಳೆಲ್ಲರೂ ಕೊರೋನಾ ವಿರುದ್ಧ ಲಸಿಕೆ ಹಾಕಿಸಿಕೊಳ್ಳುವಂತೆ ಜನರ ಮನವೊಲಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಸಲಹೆ ಮಾಡಿದರು.
ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ಕೋವಿಡ್ ನಿಯಂತ್ರಣ ಕುರಿತು ಸೋಮವಾರ ಏರ್ಪಡಿಸಿದ್ದ ಪುರಸಭಾ ಸದಸ್ಯರು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ , ಜನರ ಜೀವ ಉಳಿಸಲು ಕೋವಿಡ್ಸ್ ನಿಯಂತ್ರಣ ಇಂದಿನ ಅಗತ್ಯವಾಗಿದೆ . ನಗರ , ಪಟ್ಟಣ , ಗಾಮ ಎಂಬ ಭೇದವಿಲ್ಲದೆ ಹರಡುತ್ತಿರುವ ಸೋಂಕನ್ನು ಮಣಿಸಲು ಸಾಂಘಿಕ ಪ್ರಯತ್ನ ಮಾಡಬೇಕು ಎಂದು ಹೇಳಿದರು. ಪಟ್ಟಣದಲ್ಲಿ ಕುಡಿಯುವ ನೀರು ಪೂರೈಕೆ ಹಾಗೂ ಬೀದಿ ದೀಪ ಅಳವಡಿಕೆಗೆ ಅಗತ್ಯವಾದ ಕ್ರಮ ಕೈಗೊಳ್ಳಲಾಗುವುದು. ಪಟ್ಟಣದ ಅಭಿವೃದ್ಧಿಗೆ ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಪುರಸಭೆಯ ಉಪಾಧ್ಯಕ್ಷೆ ಆಯಿಷಾ ನಯಾಜ್, ಮುಖ್ಯಾಧಿಕಾರಿ ಡಿ.ಶೇಖರರೆಡ್ಡಿ, ಸದಸ್ಯರಾದ ಅನ್ನಿಸ್ ಅಹಮದ್, ಭಾಸ್ಕರ್ , ನಾಗರಾಜು, ಅಸೂರು ರಾಜು, ತಾಲ್ಲೂಕು ವೈದ್ಯಾಧಿಕಾರಿ ಡಾ ಎಂ.ಸಿ.ವಿಜಯ, ಆಡಳಿತಾಧಿಕಾರಿ ಡಾ ಜಿ.ಎಸ್.ಶ್ರೀನಿವಾಸ್ , ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ.ಕೆ.ಮಂಜುನಾಥರೆಡ್ಡಿ, ಎಪಿಎಂಸಿ ಮಾಜಿ ಅಧ್ಯಕ್ಷ ಎನ್.ರಾಜೇಂದ್ರ ಪ್ರಸಾದ್, ಷರೀಫ್, ವೇಣು ಇದ್ದರು. ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.