ಶ್ರೀನಿವಾಸಪುರ(www.vknews.com):- ರೂ .೧ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕೋವಿಡ್ ಟೆಸ್ಟ್ ಲ್ಯಾಬ್ ಕಾರ್ಯಾರಂಭ ಮಾಡಿದ ಮೇಲೆ ಪ್ರತಿ ದಿನ ೨ ಸಾವಿರ ಮಂದಿಗೆ ಕೋವಿಡ್ ಪರೀಕ್ಷೆ ಮಾಡಿ , ೨೪ ಗಂಟೆಯೊಳಗೆ ಫಲಿತಾಂಶ ನೀಡಲು ಸಾಧ್ಯವಾಗುತ್ತದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಸೋಮವಾರ ಭೇಟಿ ನೀಡಿ , ಆಸ್ಪತ್ರೆ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಕೋವಿಡ್ ಟೆಸ್ಟ್ ಲ್ಯಾಬ್ ಕಾಮಗಾರಿಯನ್ನು ಪರಿಶೀಲಿಸಿದ ಬಳಿಕ ಮಾತನಾಡಿ , ಇದು ರಾಜ್ಯದಲ್ಲಿ ನಿರ್ಮಾಣವಾಗುತ್ತಿರುವ ಎರಡನೇ ಟೆಸ್ಟ್ ಲ್ಯಾಬ್ ಆಗಿದೆ. ಕೋವಿಡ್ ಸೋಂಕು ತಡೆಯಲು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಹೇಳಿದರು.
ಇಲ್ಲಿನ ಕೋವಿಚ್ ಆಸ್ಪತ್ರೆಗೆ ೧೦ ವೆಂಟಿಲೇಟರ್ ಒದಗಿಸಲಾಗುವುದು. ೧೫ ದಿನಗಳಲ್ಲಿ ಆಮ್ಲಜನಕ ತಯಾರಿಕಾ ಘಟಕ ಸ್ಥಾಪಿಸಲಾಗುವುದು. ಇದರಿಂದ ತುರ್ತು ಅಗತ್ಯವಿರುವ ರೋಗಿಗಳಿಗೆ ಹೆಚ್ಚಿನ ಪ್ರಯೋಜನವಾಗುತ್ತದೆ ಎಂದು ಹೇಳಿದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಂ.ಸಿ.ವಿಜಯ , ಆಸತ್ರೆ ಆಡಳಿತಾಧಿಕಾರಿ ಡಾ. ಜಿ.ಎಸ್.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ.ಕೆ.ಮಂಜುನಾಥರೆಡ್ಡಿ , ಮುಖಂಡರಾದ ಗಂಗಾಧರ್, ನಾಗರಾಜ್ , ಮಹಮದ್ ಅಲಿ , ಕೆ.ಸಿ.ವಿ.ರಡ್ಡಿ , ಹರೀಶ್ ಇದ್ದರು.
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.