ಒಬಿಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ
(www.vknews.in)ಬೆಂಗಳೂರು : ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2020-21 ನೇ ಸಾಲಿಗೆ ‘ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ’, ‘ ಶುಲ್ಕ ವಿನಾಯಿತಿ’, ‘ ವಿದ್ಯಾಸಿರಿ, ಊಟ ಮತ್ತು ವಸತಿ ಸಹಾಯ ಯೋಜನೆ’ ಮತ್ತು ‘ ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ’ ಸೌಲಭ್ಯಕ್ಕಾಗಿ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಲು 31:05:2021 ಕ್ಕೆ ಕೊನೆಯ ದಿನಾಂಕ ನಿಗದಿ ಪಡಿಸಲಾಗಿತ್ತು.
ಇದೀಗ ಮುಂದುವರೆದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ದಿನಾಂಕ 7:06:2021 ರವರೆಗೆ ಲಾಕ್ ಡೌನ್ ಘೋಷಣೆಯಾಗಿರುವ ಹಿನ್ನೆಲೆ ಇ ಅಟೆಸ್ಟೇಷನ್ ಮಾಡಿಸುವುದು ಕಷ್ಟವಾಗಿರುತ್ತದೆ. ಆದ್ದರಿಂದ, ಈಗಾಗಲೇ ಎಸ್ ಎಸ್ ಪಿ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪ್ರಾರಂಭಗೊಳಿಸಿದ್ದು, ಅರ್ಜಿಯನ್ನು ಪೂರ್ಣಗೊಳಿಸದ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುವಂತೆ ( ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ ) ಕೊನೆಯ ದಿನಾಂಕವನ್ನು 20:06:2021 ರವರೆಗೆ ವಿಸ್ತರಿಸಲಾಗಿದೆ.
ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2020-21 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ. ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ, ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.