ಮಂಗಳೂರು (www.vknews.com) : ಕೊರೋನ ಲಾಕ್ ಡೌನ್ ನಿಂದಾಗಿ ಪ್ರಸ್ತುತ ಹಲವು ಕುಟುಂಬಗಳು ವ್ಯಾಪಾರ, ವಹಿವಾಟು ಹಾಗೂ ಉದ್ಯೋಗವಿಲ್ಲದೆ ಆರ್ಥಿಕವಾಗಿ ಕಂಗ್ಗೆಟ್ಟಿದೆ. ಇದರ ಪರಿಣಾಮ ಎದುರಿಸಲಾಗದೆ ಈಗಾಗಲೇ ನಾಲ್ಕು ಆತ್ಮಹತ್ಯೆ ಪ್ರಕರಣಗಳು ದ.ಕ. ಜಿಲ್ಲೆಯಲ್ಲಿ ದಾಖಲಾಗಿವೆ. ಹಾಗಾಗಿ ಶಾಲಾ-ಕಾಲೇಜು ಶುಲ್ಕ ಕಟ್ಟುವಂತೆ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಲ್ಲಿ ಒತ್ತಡ ಹೇರಿದ್ದಲ್ಲಿ ಮುಂದಿನ ದಿನಗಳಲ್ಲಿ ಈ ಕಾರಣದಿಂದಾಗಿ ಕೂಡ ಆತ್ಮಹತ್ಯೆ ಪ್ರಕರಣಗಳು ನಡೆಯಬಹುದು.
ಈ ನಿಟ್ಟಿನಲ್ಲಿ ಶಾಲಾ-ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳ ಪೋಷಕರಲ್ಲಿ ಒಂದೇ ಕಂತಿನಲ್ಲಿ ಶುಲ್ಕ ಪಾವತಿಸಬೇಕು ಎಂದು ದೂರವಾಣಿ ಕರೆ ಮಾಡಿ ಒತ್ತಾಯ ಹಾಕಬಾರದು, ಪಾವತಿಸದಿದ್ದರೆ ಆನ್ಲೈನ್ ಪಾಠ ತಡೆಹಿಡಿಯಲಾಗುವುದು ಎಂದು ಎಚ್ಚರಿಸಬಾರದು, ವರ್ಗಾವಣೆ ಪತ್ರ ಕೊಡುವುದಿಲ್ಲ ಎನ್ನಬಾರದು, ಲೇಖನ ಸಾಮಗ್ರಿಗಳನ್ನು ನಿರ್ದಿಷ್ಟ ಅಂಗಡಿಗಳಲ್ಲಿ ಮಾತ್ರ ಪಡೆಯಬೇಕು ಎಂದು ಒತ್ತಡ ಹಾಕಬಾರದು, ಒಂದು ವೇಳೆ ಒತ್ತಡ ಹಾಕಿದ ಬಗ್ಗೆ ದೂರುಗಳು ಬಂದರೆ ಶಿಕ್ಷಣ ಕಾಯ್ದೆಯಡಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ಸ್ಪಷ್ಟ ಸೂಚನೆ ನೀಡಿರುವುದು ಶ್ಲಾಘನೀಯವೆಂದು ಜೆಡಿಎಸ್ ರಾಜ್ಯ ಪ್ರ. ಕಾರ್ಯದರ್ಶಿ ಇಕ್ಬಾಲ್ ಅಹ್ಮದ್ ಮೂಲ್ಕಿ, ದ.ಕ. ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರಾದ ರಿಯಾಝ್ ಹೆಚ್. ಕಾರ್ನಾಡ್, ಜಿಲ್ಲಾ ಆ.ಸಂ. ಘಟಕದ ಉಪಾಧ್ಯಕ್ಷರಾದ ನಿಸಾರ್ ಅಹ್ಮದ್ ಹಾಗೂ ಶೇಕ್ ನೂರುಲ್ಲ ಮೂಲ್ಕಿ ಯವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಹಾಗೂ ಸರ್ಕಾರದ ಹೊರಡಿಸಿರುವ ಸುತ್ತೋಲೆಯನ್ನು ಮೀರಿ ಅತೀ ಹೆಚ್ಚು ಡೋನೆಷನ್ -ಶುಲ್ಕವನ್ನು ವಿಧಿಸುವ ಖಾಸಗಿ ಶಾಲಾ-ಕಾಲೇಜುಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕೆಂದು ಜೆಡಿಎಸ್ ನಾಯಕರು ಈ ಮೂಲಕ ದ.ಕ. ಜಿಲ್ಲಾಧಿಕಾರಿಯವರಲ್ಲಿ ಅಗ್ರಹಿಸಿದ್ದಾರೆ.
ಪ್ರಧಾನ ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.