ಶ್ರೀನಿವಾಸಪುರ(www.vknews.com):- ನಾಗರಿಕರ ಹಿತದೃಷ್ಟಿಯಿಂದ ರೂ . ೧ ಕೋಟಿ ವೆಚ್ಚದಲ್ಲಿ ಕೋವಿಡ್ ಟೆಸ್ಟ್ ಲ್ಯಾಬ್ ಸ್ಥಾಪಿಸಲಾಗಿದೆ , ಇದರಿಂದ ಕೊರೊನಾ ಸೋಂಕು ಪರೀಕ್ಷೆ ಫಲಿತಾಂಶ ಶೀಘ್ರವಾಗಿ ಸಿಗಲು ಸಾಧ್ಯವಾಗುತ್ತದೆ . ಎಂದು ಶಾಸಕ ಕೆ.ಆರ್. ರಮೇಶ್ ಕುಮಾರ್ ಹೇಳಿದರು .
ಪಟ್ಟಣದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕೋವಿಂಡ್ ಟೆಸ್ಟ್ ಲ್ಯಾಬನ್ನು ಸೋಮವಾರ ಉದ್ಘಾಟಿಸಿ ಮಾತನಾಡಿ , ಈ ಲ್ಯಾಬ್ ಸ್ಥಾಪನೆಗೆ ಐಸಿಎಂಸಿ ಅನುಮತಿ ದೊರೆತಿದೆ . ಇಲ್ಲಿ ದಿನವೊಂದಕ್ಕೆ ೨ ಸಾವಿರ ಮಂದಿಗೆ ಕೋವಿಡ್ ಪರೀಕ್ಷೆ ನಡೆಸಿ ೨೪ ಗಂಟೆಯೊಳಗೆ ಫಲಿತಾಂಶ ನೀಡಲಾಗುವುದು ಎಂದು ಹೇಳಿದರು . ಕೊವಿಡ್ ೨ ನೇ ಅಲೆ ಸಾಕಷ್ಟು ಸಾವು ನೋವು ತಂದಿದೆ . ೩ ನೇ ಅಲೆ ಮಕ್ಕಳ ಪಾಲಿಗೆ ಮಾರಕವಾಗಿದೆ ಎಂಬ ಮಾತು ಕೇಳಿಬರುತ್ತಿದೆ . ಆದ್ದರಿಂದ ಪೋಷಕರು ಮಕ್ಕಳ ಆರೋಗ್ಯದ ಕಡೆ ಹೆಚ್ಚಿನ ಗಮನ ನೀಡಬೇಕು . ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು . ಮಕ್ಕಳು ಕ್ಷೇಮವಾಗಿದ್ದರೆ ಮಾತ್ರ ಕುಟುಂಬದಲ್ಲಿ ನೆಮ್ಮದಿ ನೆಲೆಸಲು ಸಾಧ್ಯವಾಗುತ್ತದೆ ಎಂದು ಹೇಳಿದರು . ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಸರ್ಕಾರದಿಂದ ನಿರ್ಮಿಸಲಾಗುತ್ತಿರುವ ಆಮ್ಲಜನಕ ತಯಾರಿಕಾ ಘಟಕ ನಿಮಿಷವೂಂದಕ್ಕೆ ೫೮೦ ಲೀಟರ್ ಆಮ್ಲಜನಕ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ . ಆಸ್ಪತ್ರೆಯಲ್ಲಿ ಕೋವಿಡ್ ಪೀಡಿತರಿಗೆ ಅನುಕೂಲವಾಗುವಂತೆ ಆ .೧೩ ರಂದು ಸುಸಜ್ಜಿತ ತೀವ್ರ ನಿಗಾ ಘಟಕ ಉದ್ಘಾಟಿಸಲಾಗುವುದು . ೧೦ ವೆಂಟಿಲೇಟರ್ಗಳನ್ನು ಒದಗಿಸಲಾಗುವುದು . ಈಗಾಗಲೇ ತಾಲ್ಲೂಕಿನ ೧೪ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಆಂಬುಲೆನ್ಸ್ ಸೇವೆ ಒದಗಿಸಲಾಗಿದೆ .
ಸರ್ಕಾರ ಕೋವಿಡ್ನಿಂದ ಸಾವನ್ನಪ್ಪಿರುವ ವ್ಯಕ್ತಿಗಳ ಕುಟುಂಬಗಳಿಗೆ ಹೆಚ್ಚಿನ ಪರಿಹಾರ ನೀಡಬೇಕು . ಜನರ ಆರ್ಥಿಕ ಸಂಕಷ್ಟಕ್ಕೆ ಸರಿಯಾದ ತೀತಿಯಲ್ಲಿ ಸ್ಪಂದಿಸಬೇಕು ಎಂದು ಆಗ್ರಹಪಡಿಸಿದರು . ವಿಧಾನ ಪರಿಷತ್ ಸದಸ್ಯ ನಜೀರ್ ಅಹ್ಮದ್ , ಮಾಜಿ ಶಾಸಕ ಕೊತ್ತೂರು ಮಂಜುನಾಥ್ , ಎಂಎಸ್ಐಎಲ್ ಮಾಜಿ ಅಧ್ಯಕ್ಷ ಅನಿಲ್ ಕುಮಾರ್ , ಜಿಲ್ಲಾ ಪಂಚಾಯಿತಿ ಸದಸ್ಯರಾದ ಗೋವಿಂದಸ್ವಾಮಿ , ಮ್ಯಾಕಲ ನಾರಾಯಣಸ್ವಾಮಿ , ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್ , ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್ , ಪುರಸಭೆ ಉಪಾಧ್ಯಕ್ಷರು ಆಯಿಷಾ ನಯಾಜ್ , ಪುರಸಭೆ ಸದಸ್ಯ ತಜಮ್ಮುಲ್ ಎ ಟಿ ಎಸ್ ,ಜಿಲ್ಲಾ ಆರೋಗ್ಯಾಧಿಕಾರಿ ಡಾ . ಜಗದೀಶ್ , ತಾಲ್ಲೂಕು ಆರೋಗ್ಯಾಧಿಕಾರಿ ಡಾ . ಎಂ.ಸಿ.ವಿಜಯ , ಆಸ್ಪತ್ರೆ ಆಡಳಿತಾಧಿಕಾರಿ ಶ್ರೀನಿವಾಸ್ , ತಾಲ್ಲೂಕು ಪಂಚಾಯಿತ ಕಾರ್ಯ ನಿರ್ವಹಣಾಧಿಕಾರಿ ಎಸ್.ಆನಂದ್ , ಪರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ , ಮುಖಂಡರಾದ ಕೆ.ಕೆ.ಮಂಜುನಾಥರೆಡ್ಡಿ , ವೆಂಕಟೇಶ್ , ಸಂಜಯ್ ಲೆಡ್ಡಿ , ಫಿರೋಜ್ ಖಾನ್ , ವೇಣು ಇದ್ದರು . ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.