ರಾಯಚೂರು (www.vknews.com) : ವೀಕೆಂಡ್ ಕರ್ಫ್ಯೂ ವೇಳೆ ನಿಯಮ ಮೀರಿ ತರಕಾರಿ ಮಾರಾಟ ಮಾಡುತ್ತಿದ್ದರು ಎಂಬ ಕಾರಣಕ್ಕೆ ಬಡ ಬೀದಿ ಬದಿ ವ್ಯಾಪಾರಿಗಳು ಮೇಲೆ ದರ್ಪ ತೋರಿಸಿ, ತಮ್ಮ ಪೊಲೀಸ್ ಬೂಟು ಕಾಲಲ್ಲಿ ತರಕಾರಿ ಮತ್ತು ಸೊಪ್ಪು ಒದೆಯುವ ಮೂಲಕ ಅಮಾನವೀಯವಾಗಿ ನಡೆದುಕೊಂಡಿದ್ದಾರೆ ಎಂಬ ಆರೋಪದಡಿ ,ಪೊಲೀಸ್ ಅಝಮ್ನನ್ನು ರಾಯಚೂರು ಜಿಲ್ಲಾ ಪೊಲೀಸ್ ಅಧೀಕ್ಷಕ ಪ್ರಕಾಶ್ ನಿಕಮ್ ಅಮಾನತುಗೊಳಿಸಿ ಆದೇಶಿಸಿದ್ದಾರೆ.
ರಾಯಚೂರು ಜಿಲ್ಲಾದ್ಯಂತ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದ್ದ ಹಿನ್ನೆಲೆ, ತುರ್ತು ಸೇವೆಗೆ ಮಾತ್ರ ಅವಕಾಶವಿತ್ತು, ರಾಯಚೂರು ನಗರದ ತರಕಾರಿ ಮಾರುಕಟ್ಟೆ, ಭಂಗಿಕುಂಟಾ, ಚಂದ್ರಮೌಳೇಶ್ವರ ವೃತ್ರದಿಂದ ಪಟೇಲ್ ರಸ್ತೆ ಮಾರ್ಗದಲ್ಲಿ ರೈತರು, ವರ್ತಕರು ತರಕಾರಿ ಮಾರಾಟ ಮಾಡುತ್ತಿದ್ದರು ಎನ್ನಲಾಗಿದ್ದು ಇದನ್ನು ಕಂಡು ಆಕ್ರೋಶಗೊಂಡ ಪಿಎಸ್ಐ ತರಕಾರಿಯನ್ನೆಲ್ಲ ಒದ್ದು ಚಲ್ಲಾಪಿಲ್ಲಿ ಮಾಡಿ,ಅಲ್ಲದೇ ತರಕಾರಿ ಮಾರಾಟಗಾರರ ಮೇಲೆ ಲಾಠಿ ಬೀಸಿದ್ದ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಪಿಎಸ್ ಐ ರವರನ್ನ ಅಮಾನತು ಮಾಡಲಾಗಿದೆ.
ಹೊಟ್ಟೆ ಪಾಡಿಗಾಗಿ ತರಕಾರಿ ವ್ಯಾಪಾರ ಮಾಡುತ್ತಿದ್ದ ಬೀದಿಬದಿಯ ವ್ಯಾಪಾರಿಗಳ ಮೇಲೆ ದರ್ಪ ತೋರಿಸಿದ್ದ ಪೊಲೀಸ್ ಅಧಿಕಾರಿಯೂ ಒಬ್ಬ ಜವಾಬ್ದಾರಿಯುತ ಅಧಿಕಾರಿಯಾಗಿ ಅಸಭ್ಯ ವರ್ತನೆ ತೋರಿದನ್ನು ಸಾರ್ವಜನಿಕರು ಖಂಡಿಸಿದ್ದಾರೆ.
ಪ್ರಧಾನ ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.