ಶ್ರೀ ಸುರೇಶ ಕುಮಾರ್, ಕರ್ನಾಟಕ ಸರಕಾರದ ಶಿಕ್ಷಣ ಮಂತ್ರಿಗಳು
SSLC ಪರೀಕ್ಷೆ ಅನುಸರಿಸಬೇಕಾದ ಮಾರ್ಗಸೂಚಿ ಬಗ್ಗೆ “ಎಸ್ ಒ ಪಿ” ಬಿಡುಗಡೆ
1).ಪರೀಕ್ಷಾ ವೇಳೆಯೊಳಗೆ ಒಂದು ಡೋಸ್ ಲಸಿಕೆ ಕಡ್ಡಾಯ.
2).ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಎಸ್ ಒ ಪಿ ಅನುಷ್ಠಾನಗೊಳಿಸಲು ಮಾಡಿಕೊಂಡಿರುವ ಸಿದ್ಧತೆಗಳನ್ನು ಪರಿಶೀಲಿಸುವುದು ಡಿಸಿ,ಸಿಇಒ ಮತ್ತು ಎಸ್ ಪಿ ಜವಾಬ್ದಾರಿ.
3).ಪ್ರತಿದಿನವೂ ಪರೀಕ್ಷೆ ಆರಂಭಕ್ಕೂ ಮುನ್ನ ಮತ್ತು ಪರೀಕ್ಷೆ ನಂತರ ಪರೀಕ್ಷಾ ಕೇಂದ್ರ, ಕೊಠಡಿ,ಪೀಠೋಪಕರಣ ಮತ್ತು ಶೌಚಾಲಯಗಳ ಸ್ಯಾನಿಟೈಜೇಷನ್.
4).ಪರೀಕ್ಷಾ ಕೇಂದ್ರಕ್ಕೆ ಆಗಮನ ಮತ್ತು ನಿರ್ಗಮನ ಹಾಗೆಯೇ ಕೊಠಡಿ ಪ್ರವೇಶ ಸಮಯದಲ್ಲಿ ದೈಹಿಕ ಅಂತರ ಕಡ್ಡಾಯ.
5).ವಿದ್ಯಾರ್ಥಿಗಳ ಕೈಗೆ ಸ್ಯಾನಿಟೈಜ್ ಮಾಡುವುದು. ಒಂದು ಡೆಸ್ಕ್ ಗೆ ಒಬ್ಬ ಪರೀಕ್ಷಾರ್ಥಿಯಂತೆ ಪರೀಕ್ಷಾ ಕೊಠಡಿಯಲ್ಲಿ 12 ಮಕ್ಕಳಿಗೆ ಮಾತ್ರ ಅವಕಾಶ.
6).ಮನೆಯಿಂದ ನೀರಿನ ಬಾಟಲ್ ಮತ್ತು ಊಟದ ಡಬ್ಬಿ ತರುವುದಕ್ಕೆ ಅವಕಾಶ.
7).ಗ್ರಾಮೀಣ ವಿಭಾಗದ ಅಭ್ಯರ್ಥಿಗಳು ಸಾಧ್ಯವಾದಷ್ಟು ತಾಲೂಕು ಕೇಂದ್ರಗಳಿಗೆ ಹೋಗದಂತೆ ಪರೀಕ್ಷಾ ಕೇಂದ್ರಗಳನ್ನು ರಚಿಸುವುದು.
8).ಕೆಮ್ಮು,ನೆಗಡಿ,ಜ್ವರ ಮೊದಲಾದುವುಗಳಿಂದ ಬಳಲುತ್ತಿರುವ ಅಭ್ಯರ್ಥಿಗಳಿಗಾಗಿ ಕನಿಷ್ಠ 2 ಕೊಠಡಿಗಳನ್ನು ವಿಶೇಷ ಕೊಠಡಿಗಳನ್ನಾಗಿ ಕಾಯ್ದಿರಿಸಬೇಕು.
9).ಪರೀಕ್ಷಾ ಕೇಂದ್ರದಲ್ಲಿ ಥರ್ಮಲ್ ಸ್ಕ್ಯಾನರ್,ಪಲ್ಸ್ಆಕ್ಸಿಮೀಟರ್, ಪ್ರಥಮ ಚಿಕಿತ್ಸಾ ಪೆಟ್ಟಿಗೆ ಕಡ್ಡಾಯ.
10).ಮಾಸ್ಕ್ ಧರಿಸದ ವಿದ್ಯಾರ್ಥಿಗಳಿಗೆ ಆರೋಗ್ಯ ಕೌಂಟರ್ ಗಳಲ್ಲೇ ಮಾಸ್ಕ್ ವಿತರಣೆ
11).ಆರೋಗ್ಯ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಪ್ರತಿ ತಾಲೂಕಿಗೊಂದು ತುರ್ತು ಚಿಕಿತ್ಸಾ ವಾಹನ ಮೀಸಲು
12).ಅಗತ್ಯ ಬಿದ್ದರೆ ಸಿಬ್ಬಂದಿ ಫೇಸ್ ಶೀಲ್ಡ್
13).ಗಡಿ ಭಾಗದ ಪರೀಕ್ಷಾ ಕೇಂದ್ರಗಳಿಗೆ ಹೊರ ರಾಜ್ಯದಿಂದ ಬರುವ ಪರೀಕ್ಷಾರ್ಥಿಗಳಿಗೆ ಅನುವಾಗುವಂತೆ ಪರೀಕ್ಷೆಗಳ ದಿವಸದಂದು ರಾಜ್ಯದ ಗಡಿ ಪ್ರವೇಶಕ್ಕೆ ಜಿಲ್ಲಾಡಳಿತದ ಸಮನ್ವಯದೊಂದಿಗೆ ಕ್ರಮ
14).ಪರೀಕ್ಷಾರ್ಥಿಗಳಿಗೆ ಕೋವಿಡ್ ಪಾಸಿಟೀವ್ ಕಂಡು ಬಂದಿದ್ದರೆ ಅಂತಹ ಪರೀಕ್ಷಾರ್ಥಿಗೆ ತಾಲೂಕಿಗೊಂದು ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಿ ಅಲ್ಲಿಯೇ ಪರೀಕ್ಷೆಗೆ ವ್ಯವಸ್ಥೆ.
15).ಕುಟುಂಬದಲ್ಲಿ ಯಾರಿಗಾದರೂ ಸೋಂಕು ತಗುಲಿದ್ದು, ಪರೀಕ್ಷಾರ್ಥಿ ಐಸೋಲೇಷನ್ ನಲ್ಲಿದ್ದರೆ ಅವರನ್ನು ತಪಾಸಣೆ ನಡೆಸಿ ಅನಾರೋಗ್ಯವಾಗಿರುವುದು ಕಂಡುಬಂದರೆ ಸಮೀಪದ ವಿದ್ಯಾರ್ಥಿ ಕೋವಿಡ್ ಕೇರ್ ಸೆಂಟರ್ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ.
16).ಕೋವಿಡ್ ಆರೈಕೆ ಕೇಂದ್ರದಲ್ಲಿ ಒಂದು ಅಂಬುಲೆನ್ಸ್ ವಾಹನ ಕಾಯ್ದಿರಿಕೆ
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.