(ವಿಶ್ವಕನ್ನಡಿಗ ನ್ಯೂಸ್ ),ಬೆಂಗಳೂರು: ರಾಜ್ಯ ಬಿಜೆಪಿಯ ಒಳ ರಾಜಕೀಯ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ವಿಚಾರ ಇನ್ನೂ ಬೂದಿ ಮುಚ್ಚಿದ ಕೆಂಡದಂತಿದೆ. ಬಿಜೆಪಿಯ ಅತೃಪ್ತ ನಾಯಕರ ಬಣ ಸದ್ದಿಲ್ಲದೆ ತಮ್ಮ ಕಾರ್ಯಾಚರಣೆ ಮುಂದುವರೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡಿದ ಬಳಿಕ ಬಿಎಸ್ವೈ ಕುಟುಂಬ ರಾಜಕಾರಣ ಮತ್ತಷ್ಟು ಬಿರುಸುಗೊಂಡಿದೆ. ನಿನ್ನೆ ರಾತ್ರಿ ಬಿಎಸ್ವೈ ಕುಟುಂಬಸ್ಥರು ಸೇರಿದಂತೆ ಪುತ್ರರಾದ ಸಂಸದ ಬಿ.ವೈ.ರಾಘವೇಂದ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಜೊತೆ ಯಡಿಯೂರಪ್ಪ ಅವರು ಗಂಭೀರ ಚರ್ಚೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಚರ್ಚೆ ಬಳಿಕ ವಿಜಯೇಂದ್ರ ದೆಹಲಿಗೆ ದಿಢೀರ್ ಪ್ರಯಾಣ ಕೈಗೊಂಡಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ.
ಒಂದು ಮೂಲದ ಪ್ರಕಾರ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಮಂತ್ರಿಗಿರಿ ಗಿಟ್ಟಿಸುವ ಸಲುವಾಗಿ ಕಸರತ್ತು ನಡೆದಿದೆ ಎಂದು ತಿಳಿದುಬಂದಿದೆ.
ಮತ್ತೊಂದೆಡೆ ಬಿ.ವೈ. ವಿಜಯೇಂದ್ರ ಅವರ ರಾಜಕೀಯ ಭವಿಷ್ಯ ಹಾಗೂ ಬಿಎಸ್ವೈ ಸಿಎಂ ಕುರ್ಚಿ ಉಳಿಸಿಕೊಳ್ಳಲು ಚರ್ಚಿಸುವ ಸಲುವಾಗಿ ವಿಜಯೇಂದ್ರ ದಿಲ್ಲಿಗೆ ದೌಡಾಯಿಸಿದ್ದಾರೆ ಎನ್ನಲಾಗುತ್ತಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.