ಕೋಲಾರ (ವಿಶ್ವ ಕನ್ನಡಿಗ ನ್ಯೂಸ್):- ಬೆಂಗಳೂರು ವಿಶ್ವವಿದ್ಯಾಲಯದ ೫೬ ನೇ ಘಟಿಕೋತ್ಸವದಲ್ಲಿ ಸಹ್ಯಾದ್ರಿ ಪದವಿ ಕಾಲೇಜಿನ ವಿದ್ಯಾರ್ಥಿನಿಯಾದ ನಾಜಿಯಾ ಅಂಜುಂ ರವರು ಬಿಸಿಎ ವಿಭಾಗದಲ್ಲಿ ವಿಶ್ವವಿದ್ಯಾಲಯಕ್ಕೆ ೮ ನೇ ರಾಂಕ್ ಪಡೆದು ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ . ಹಾಗೂ ಬಿ.ಎಸ್ಸಿ ಭೌತ ರಸಾಯನಶಾಸ್ತ್ರ ವಿಷಯದಲ್ಲಿ ರೂಹಿ ಸುಲ್ತಾನ , ಅಕ್ಷಯ ಇಎಸ್ ಮತ್ತು ಮೈನ ಹೆಚ್.ಎ ಎಂಬ ಈ ಮೂರು ವಿದ್ಯಾರ್ಥಿಗಳು ಚಿನ್ನದ ಪದಕ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ .
ಎಲ್ಲಾ ವಿದ್ಯಾರ್ಥಿಗಳಿಗೆ ಸಹ್ಯಾದ್ರಿ ಪದವಿ ಕಾಲೇಜಿನ ಆಡಳಿತ ಮಂಡಳಿ , ಪ್ರಾಂಶುಪಾಲರು . ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ . ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.