ಶ್ರೀನಿವಾಸಪುರ ( ವಿಶ್ವ ಕನ್ನಡಿಗ ನ್ಯೂಸ್ ) :- ಪಟ್ಟಣದಲ್ಲಿ ಜು .೧೦ ರಿಂದ ಮರುಬಳಕೆ ಸಾಧ್ಯವಿಲ್ಲದ ಪ್ಲಾಸ್ಟಿಕ್ ಪದಾರ್ಥಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ ಹೇಳಿದರು .
ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ವರ್ತಕರ ಸಭೆಯಲ್ಲಿ ಮಾತನಾಡಿ , ಈ ವಿಷಯದಲ್ಲಿ ವರ್ತಕರು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದರು .
ಪುರಸಭೆ ಆರೋಗ್ಯ ನಿರೀಕ್ಷಕ ಎಂ. ಪೃಥ್ವಿರಾಜ್ ಮಾತನಾಡಿ , ಪಟ್ಟಣದಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಮಾರಾಟದಿಂದ ಜನ , ಜಾನುವಾರು ತೊಂದರೆ ಅನುಭವಿಸುವಂತಾಗಿದೆ . ಆಕಸ್ಮಿಕವಾಗಿ . ಪ್ಲಾಸ್ಟಿಕ್ ಸೇವಿಸಿದ ಜಾನುವಾರುಗಳು ಸಾವನ್ನಪ್ಪುತ್ತಿವೆ . ಕೊಳೆಯದ , ಮರು ಬಳಕೆಗೆ ಯೋಗ್ಯವಲ್ಲದ ಪ್ಲಾಸ್ಟಿಕ್ ಭೂ ಮಾಲಿನ್ಯಕ್ಕೆ ಕಾರಣವಾಗಿದೆ . ಚರಂಡಿಗಳಲ್ಲಿ ನಿಂತು ನೀರು ಸರಾಗವಾಗಿ ಹರಿದು ಹೋಗದಂತೆ ತಡೆಯುತ್ತಿದೆ ಎಂದು ಹೇಳಿದರು .
ಪುರಸಭೆ ಅಧ್ಯಕ್ಷೆ ಲಲಿತಾ ಶ್ರೀನಿವಾಸ್ , ಉಪಾಧ್ಯಕ್ಷೆ ಆಯಿಷಾ ನಯಾಜ್ , ಸಿಎಒ ರಾಜೇಶ್ವರಿ , ನಾಗೇಶ್ , ಸಂತೋಷ್ , ಸುರೇಶ್ , ಶ್ರೀನಾಥ್ , ಚಂದ್ರಶೇಖರ್ ಇದ್ದರು . ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.