ಶ್ರೀನಿವಾಸಪುರ ( ವಿಶ್ವ ಕನ್ನಡಿಗ ನ್ಯೂಸ್ ) :- ಹಸಿದವರಿಗೆ ಅನ್ನ ನೀಡುವುದು ನಮ್ಮ ಪರಂಪರೆಯ ಹೆಗ್ಗುರುತಾಗಿದೆ ಎಂದು ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್ ಹೇಳಿದರು.
ಪಟ್ಟಣದ ಮಾರುತಿ ಸಭಾಂಗಣದಲ್ಲಿ ರವೀಂದ್ರಾಚಾರ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಮಂಗಳವಾರ ಸವಿತಾ ಸಮಾಜ , ಮಡಿವಾಳ ಮತ್ತಿತರ ಸಮಾಜಗಳ ಬಡವರಿಗೆ ಆಹಾರ ಪದಾರ್ಥದಗಳ ಕಿಟ್ ವಿತರಿಸಿ ಮಾತನಾಡಿದರು.
ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರು ಕೆ.ಕೆ.ಮಂಜುನಾಥರೆಡ್ಡಿ ಮಾತನಾಡಿ , ಶಮಂತರು ನೊಂದವರಿಗೆ ಕೈಲಾದ ನೆರವು ನೀಡುತ್ತಿದ್ದಾರೆ . ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು . ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು . ಕೊರೊನಾ ಕಟ್ಟಿಹಾಕಲು ಎಲ್ಲರೂ ಸಹಕರಿಸಬೇಕು ಎಂದು ಹೇಳಿದರು.
ರವೀಂದಾಚಾರ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ರಾಮಾನುಜಾಚಾರ್ ಮಾತನಾಡಿ , ಸಮಾಜ ಸೇವಾ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಶಾಸಕ ಕೆ.ಆರ್.ರಮೇಶ್ ಕುಮಾರ್ ಪ್ರೇರಣೆಯಾಗಿದ್ದಾರೆ ಎಂದು ಹೇಳಿದರು .
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಎಸ್.ಆನಂದ್ , ತೆಂಗಿನ ನಾರು ಮಂಡಳಿ ಮಾಜಿ ಅಧ್ಯಕ್ಷ ವೆಂಕಟೇಶ್ , ಮುಖಂಡರಾದ ರಾಮಕೃಷ್ಣಾರೆಡ್ಡಿ , ನರಸಿಂಹಮೂರ್ತಿ , ಮಂಜುನಾಥ್ , ಸೋಮು , ಮಂಜು , ವೇಣು , ಹರೀಶ್ ಕುಮಾರ್ , ನರಸಿಂಹ , ರತ್ನಪ್ಪ ಇದ್ದರು . ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.