ಪುತ್ತೂರು(ವಿಶ್ವಕನ್ನಡಿಗ ನ್ಯೂಸ್): ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಬಳಿಯಿರುವ ಗಾಂಧಿ ಪ್ರತಿಮೆಯ ಕನ್ನಡಕವನ್ನು ತೆಗೆದು ಮತ್ತು ಟೀ ಶರ್ಟ್ ನ್ನು ತಲೆಗೆ ಇಟ್ಟು ಅವಮಾನ ಮಾಡಿದ ಕಿಡಿಗೇಡಿಗಳನ್ನು ಶೀಘ್ರವೇ ಬಂಧಿಸಬೇಕೆಂದು ಎಸ್ಡಿಪಿಐ ಆಗ್ರಹಿಸಿದೆ.
ರಾಜ್ಯದ ಹಲವು ಕಡೆ ಈ ಹಿಂದೆಯು ಇಂತಹ ಘಟನೆಗಳು ನಡೆದು ಗಾಂಧೀಜಿ ,ಸಂವಿಧಾನ ಶಿಲ್ಪಿ ಅಂಬೇಡ್ಕರ್ ರವರ ಪ್ರತಿಮೆಗಳನ್ನು ಹಾನಿಗೊಳಿಸಿದ ಮತ್ತು ಧ್ವಂಸಗೊಳಿಸಿದ ಘಟನೆಗಳು ನಡೆದಿದೆ,ಅಂತಹದೇ ಮನಸ್ಥಿತಿಯ ತಂಡದಿಂದ ಈ ಕೃತ್ಯವು ನಡೆದಿರುವ ಸಾಧ್ಯತೆ ಇದೆ.
ಇಂದು ಪ್ರತಿಮೆಗೆ ಅವಮಾನ ಮಾಡಿದ ಕಿಡಿಗೇಡಿಗಳನ್ನು ಬಂಧಿಸದೆ ಇದ್ದಲ್ಲಿ ಮುಂದಿನ ದಿನಗಳಲ್ಲಿ ಪ್ರತಿಮೆಯನ್ನು ಧ್ವಂಸಗೊಳಿಸಿ ಪುತ್ತೂರಿನ ಶಾಂತಿಯನ್ನು ಭಂಗಗೊಳಿಸುವ ಸಾಧ್ಯತೆ ಕೂಡ ಇದೆ. ಗಾಂಧಿಯನ್ನು ಕೊಂದ ನಾಥೂರಾಮ್ ಗೋಡ್ಸೆಯನ್ನು ಆರಾಧಿಸುವ ಒಂದು ವರ್ಗ ಇಲ್ಲಿ ಕಾರ್ಯಾಚರಿಸುತ್ತಿರುವಾಗ ಈ ಪ್ರಕರಣವನ್ನು ಪೋಲಿಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ನಗರದಲ್ಲಿ ಅಳವಡಿಸಿರುವ ಸಿಸಿ ಕೆಮರಾಗಳನ್ನು ಪರಿಶೀಲಿಸಿ ಆರೋಪಿಗಳ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಕೂಡಲೇ ಬಂಧಿಸಬೇಕೆಂದು ಎಸ್ಡಿಪಿಐ ಆಗ್ರಹಿಸುತ್ತದೆ. ಅದೇ ರೀತಿ ಆರೋಪಿಗಳನ್ನು ಶೀಘ್ರವೇ ಬಂದಿಸದೇ ಇದ್ದಲ್ಲಿ ಗಾಂಧಿ ಪ್ರತಿಮೆಯ ಮುಂಭಾಗದಲ್ಲೇ ಎಸ್ಡಿಪಿಐ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಿದೆ ಎಂದು ಪಕ್ಷದ ಪುತ್ತೂರು ವಿಧಾನಸಭಾ ಕ್ಷೇತ್ರಾಧ್ಯಕ್ಷ ಸಿದ್ದೀಕ್ ಕೆ.ಎ ಪತ್ರಿಕಾ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.