ಕೋಲಾರ ( ವಿಶ್ವ ಕನ್ನಡಿಗ ನ್ಯೂಸ್ ) :- ಕೋಲಾರ ಜಿಲ್ಲೆ ಗಡಿ ಪ್ರದೇಶವಾಗಿರುವುದರಿಂದ ಕನ್ನಡ ಭಾಷೆ ಮತ್ತು ಕನ್ನಡ ಸಂಸ್ಕೃತಿ ಅಭಿವೃದ್ಧಿಗಾಗಿ ಎಲ್ಲರೂ ಒಟ್ಟಿಗೆ ಶ್ರಮಿಸೋಣ , ನಾಡು , ಭಾಷೆ ಮತ್ತು ಸಂಸ್ಕೃತಿಗೆ ಮೊದಲನೇ ಆದ್ಯತೆ ನೀಡೋಣ ಎಂದು ಕೋಲಾರ ಲೋಕ ಸಭಾ ಕ್ಷೇತ್ರದ ಸಂಸದರಾದ ಎಸ್ ಮುನಿಸ್ವಾಮಿ ಅವರು ಹೇಳಿದರು. ಇಂದು ಸುವರ್ಣ ಕನ್ನಡ ಭವನದ ಒಳಾಂಗಣ ವಿನ್ಯಾಸ ಕೆಲಸಗಳಾದ ಆಸನ ವ್ಯವಸ್ಥೆ , ಧ್ವನಿವರ್ಧಕ ಆಳವಡಿಕೆ ಹಾಗೂ ವಿದ್ಯುದೀಕರಣ ಕಾಮಗಾರಿಯ ಉದ್ಘಾಟನೆ ನಡೆಸಿ ಸಂಸದರು ಮಾತನಾಡಿದರು. ಕೋಲಾರ ವಿಧಾನಸಭಾ ಕ್ಷೇತ್ರ ಶಾಸಕರಾದ ಶ್ರೀನಿವಾಸ ಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಸುಸಜ್ಜಿತ ಸುವರ್ಣ ಕನ್ನಡ ಭವನವನ್ನು ಕೋಟ್ಯಾಂತರ ರೂ ಖರ್ಚು ಮಾಡಿ ನಿರ್ಮಾಣ ಮಾಡಿದ್ದು , ಭವನದ ನಿರ್ವಹಣೆಯನ್ನು ಸಮರ್ಪಕವಾಗಿ ಬಳಸುವಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹೆಚ್ಚಿನ ಗಮನ ಹರಿಸಿ ಸ್ವಚ್ಛವಾಗಿ ಇಟ್ಟುಕೊಂಡು ಹೆಚ್ಚಿನ ಕಾರ್ಯಕ್ರಮಗಳನ್ನು ಆಯೋಜಿಸಿ ಉತ್ತಮ ರೀತಿಯಲ್ಲಿ ಸದ್ಬಳಕೆಯಾಗಬೇಕು ಎಂದು ಅವರು ಹೇಳಿದರು.
ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜು ಅವರು ಮಾತನಾಡಿ ಸುವರ್ಣ ಕನ್ನಡ ಭವನ 5 ವರ್ಷಗಳಿಂದ ನೆಲಗುದ್ದಿಗೆ ಬಿದ್ದಿತ್ತು , ಈಗ ಸುಸಜ್ಜಿತವಾಗಿ ಭವನ ನಿರ್ಮಾಣಗೊಂಡಿದೆ ಮುಂದಿನ ದಿನಗಳಲ್ಲಿ ಹೆಚ್ಚಿನ ಸರ್ಕಾರಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಭವನವನ್ನು ಸದ್ಬಳಕೆಗೊಳಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಓಂಶಕ್ತಿ ಚಲಪತಿ , ನಗರ ಸಭೆಯ ಅಧ್ಯಕ್ಷರಾದ ಶ್ವೇತಾ ಶಬರೀಶ್ , ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಾಗಾನಂದ ಕೆಂಪರಾಜ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಕುಮಾರ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಕೆ.ಎಸ್.ನಾರಾಯಣಗೌಡ , ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.