ಕುಂದಾಪುರ ,(ವಿಶ್ವ ಕನ್ನಡಿಗ ನ್ಯೂಸ್ ): ಬೆಂಗಳೂರಿನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಫೋಟೋಗ್ರಫಿ ಮುಗಿಸಿ ಭಾನುವಾರ ತಡರಾತ್ರಿ ಕಾರಿನಲ್ಲಿ ಬರುತ್ತಿರುವ ಸಂದರ್ಭ ದುರುಗಡೆಯಿಂದ ಸಾಗುತ್ತಿರುವ ಲಾರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯ ಗೊಂಡಿದ್ದ ಕುಂದಾಪುರ ಮೂಲದ ಛಾಯಾಗ್ರಾಹಕ ಚಿಕಿತ್ಸೆ ಫಲಕಾರಿಯಾಗದೇ ಸಾವನೋಪ್ಪಿದ್ದಾರೆ. ಇಲ್ಲಿನ ನಾವುಂದದ ಮಾನಸ ಸ್ಟೂಡಿಯೋ ಮಾಲೀಕ ಹೇರೂರು ಅಶೋಕ್ ಶೆಟ್ಟಿ (58) ಸಾವನ್ನಪ್ಪಿದವರು ಎಂದು ಗುರುತಿಸಲಾಗಿದೆ .ಮೃತ ಅಶೋಕ್ ಶೆಟ್ಟಿಯವರು ಬೆಂಗಳೂರಿನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಫೋಟೋಗ್ರಫಿ ಮುಗಿಸಿ ಭಾನುವಾರ ತಡರಾತ್ರಿ ತಮ್ಮ ಕಾರಿನಲ್ಲಿ ಪುತ್ರ ಪನ್ನಗ ಶೆಟ್ಟಿ ಹಾಗೂ ಇನ್ನೋರ್ವ ಛಾಯಾಗ್ರಾಹಕ ಕುಮಾರ್ ಜೊತೆ ಮನೆಗೆ ಬರುತ್ತಿರುವ ವೇಳೆಯಲ್ಲಿ ಸೋಮವಾರ ನಸುಕಿನ ಜಾವ ಈ ಅವಘಡ ನಡೆದಿತ್ತು. ಕಾರು ತಮಕೂರು ಸಮೀಪದ ತಾವರೆಕೆರೆ ಸಮೀಪಿಸುತ್ತಿದ್ದಂತೆಯೇ ಎದುರುಗಡೆಯಿಂದ ಸಾಗುತ್ತಿರುವ ಲಾರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿತ್ತು. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದ್ದು, ಕಾರು ಚಲಾಯಿಸುತ್ತಿದ್ದ ಪನ್ನಗ ಶೆಟ್ಟಿ ಹಾಗೂ ಮುಂದೆ ಕುಳಿತಿದ್ದ ಅಶೋಕ್ ಶೆಟ್ಟಿಯವರಿಗೆ ಗಂಭೀರ ಗಾಯಗಳಾಗಿತ್ತು. ಕಾರಿನ ಹಿಂಬದಿ ಕುಳಿತಿದ್ದ ಇನ್ನೋರ್ವ ಛಾಯಾಗ್ರಾಹಕ ಕುಮಾರ್ ಯಾವುದೇ ಗಾಯಗಳಿಲ್ಲದೇ ಪ್ರಾಣಾಪಾಯದಿಂದ ಪಾರಾಗಿದ್ದರು.ಗಂಭೀರ ಗಾಯಗೊಂಡ ಅಶೋಕ್ ಶೆಟ್ಟಿಯವರನ್ನು ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಲೆಭಾಗಕ್ಕೆ ಬಲವಾದ ಪೆಟ್ಟು ತಗುಲಿದ್ದರಿಂದ ಆಸ್ಪತ್ರೆಯಲ್ಲಿ ಸಾವು ಬದುಕಿನ ಹೋರಾಟ ನಡೆಸಿ ಕೊನೆಗೂಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ. ಇನ್ನು ಪುತ್ರ ಪನ್ನಗ ಶೆಟ್ಟಿಯವರನ್ನು ಸೋಮವಾರವೇ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದ, ಚಿಕಿತ್ಸೆ ನೀಡಲಾಗುತ್ತಿದೆ.ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.