ಕೋಲಾರ ( ವಿಶ್ವ ಕನ್ನಡಿಗ ನ್ಯೂಸ್ ): ರಾಜ್ಯದಲ್ಲಿ ಜಿಲ್ಲಾ ಪಂಚಾಯತಿ ಹಾಗೂ ತಾಲ್ಲೂಕು ಪಂಚಾಯತಿ ಚುನಾವಣೆಯ ಮೀಸಲಾತಿ ಪಟ್ಟಿ ಪ್ರಕಟವಾಗಿದ್ದು , ಇದರ ಹಿನ್ನಲೆಯಲ್ಲಿ ಮಾಜಿ ಶಾಸಕ ಆರ್.ವರ್ತೂರು ಪ್ರಕಾಶ್ ತಮ್ಮ ಬೆಂಬಲಿಗರ ಸಭೆಯನ್ನು ಮಂಗಳವಾರ ತಮ್ಮ ನಿವಾಸದಲ್ಲಿ ನಡೆಸಿದರು.
ಸಭೆಯಲ್ಲಿ ಕೋಲಾರ ವಿಧಾನ ಸಭಾ ಕ್ಷೇತ್ರದ ೪ ಜಿಲ್ಲಾ ಪಂಚಾಯತಿ ಹಾಗೂ ೧೦ . ತಾಲ್ಲೂಕು ಪಂಚಾಯತಿಗಳ ಪೈಕಿ ಅರಹಳ್ಳಿ ತಾಲ್ಲೂಕು ಪಂಚಾಯತಿ ಕ್ಷೇತ್ರದ ಚುನಾವಣೆಯಲ್ಲಿ ಸರ್ಧಿಸಲು ಆಸಕ್ತಿ ಇರುವವರ ಹಾಗೂ ತಮ್ಮ ಕಾರ್ಯಕರ್ತರ ಅಭಿಪ್ರಾಯಗಳನ್ನು ಸಂಗ್ರಹಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ಆರ್.ವರ್ತೂರು ಪ್ರಕಾಶ್ , ತಾವು ಅಧಿಕಾರದಲ್ಲಿ ಇಲ್ಲದಿದ್ದರೂ ನಮ್ಮ ಬೆಂಬಲಿಗರು ಹಾಗೂ ಕಾರ್ಯಕರ್ತರು ಒಟ್ಟಿಗೆ ತಮ್ಮ ಜೊತೆ ಇದ್ದಾರೆ . ನಮ್ಮ ಶಕ್ತಿ ಕುಂದಿಲ್ಲ . ನಮಗೆ ಯಾವುದೇ ಪಕ್ಷದ ಬೆಂಬಲ ಇಲ್ಲದಿದ್ದರೂ ಗೆಲ್ಲುವ ಶಕ್ತಿ ಇದೆ . ಈಗಾಗಲೇ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ನಮ್ಮ ಶಕ್ತಿ ತೋರಿಸಿದ್ದೇವೆ . ಮುಂದೆ ಬರುವ ಜಿಲ್ಲಾ ಪಂಚಾಯತಿ ಹಾಗೂ ತಾಲ್ಲೂಕು ಪಂಚಾಯತಿ ಚುನಾವಣೆಯಲ್ಲಿ ನಮ್ಮ ಬಣದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಅಧಿಕಾರ ಹಿಡಿಯಬೇಕೆಂದರು.
ನಾವು ಜಿಲ್ಲಾ ಪಂಚಾಯತಿ ಹಾಗೂ ತಾಲ್ಲೂಕು ಪಂಚಾಯತಿ ಚುನಾವಣೆಯಲ್ಲಿ ಶಕ್ತಿ ಪ್ರದರ್ಶನವಾದರೆ ಮುಂದಿನ ಎಂ.ಎಲ್.ಎ ಚುನಾವಣೆಯಲ್ಲಿ ಗೆಲ್ಲಲು ಅನುಕೂಲವಾಗಲಿದ್ದು , ಅತಿ ವಿಶ್ವಾಸದಿಂದ ಕಾರ್ಯಕರ್ತರು ಮೈಮರೆಯದೆ ಕೆಲಸ ಮಾಡಿದರೆ ಜಿಲ್ಲೆಯಲ್ಲಿ ೧೦ ಜಿಲ್ಲಾ ಪಂಚಾಯತಿ ಸ್ಥಾನಗಳನ್ನು ಹಾಗೂ ತಾಲ್ಲೂಕು ಪಂಚಾಯತಿಯಲ್ಲಿ ಅಧಿಕಾರ ಪಡೆಯಬಹುದೆಂದು ತಿಳಿಸಿದರು. ಸಭೆಯಲ್ಲಿ ವರ್ತೂರು ಬಣದ ಮುಖಂಡರುಗಳಾದ ಬೆಗ್ಲಿ ಸೂರ್ಯ ಪ್ರಕಾಶ್ , ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಸಿ.ಎಸ್.ವೆಂಕಟೇಶ್ , ಜಿ.ಪಂ.ಮಾಜಿ ಸದಸ್ಯ ಅರುಣ್ ಪ್ರಸಾದ್ , ತಾ.ಪಂ.ಮಾಜಿ ಅಧ್ಯಕ್ಷ ಆಂಜನಪ್ಪ , ಪುಸ್ತಿ ನಾರಾಯಣಸ್ವಾಮಿ , ಕೃಷ್ಣಗೌಡ , ಅಪ್ಪಯ್ಯಪ್ಪ , ಅರಹಳ್ಳಿ ಮಂಜುನಾಥ್ , ಸುಧಾಕರ್ , ಅಮ್ಮೇರಹಳ್ಳಿ ಚಲಪತಿ , ರವಿ , ಹೂವಳ್ಳಿ ಚಂದ್ರಶೇಖರ್ , ಭಗವಂತಪ್ಪ ಹಾಗೂ ಗ್ರಾಮ ಪಂಚಾಯತಿಗಳ ಅಧ್ಯಕ್ಷರು , ಸದಸ್ಯರು ಸೇರಿದಂತೆ ನೂರಾರು ಕಾರ್ಯಕರ್ತರು ಹಾಜರಿದರು.
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.