ಕುಂದಾಪುರ ,(ವಿಶ್ವ ಕನ್ನಡ ನ್ಯೂಸ್ ): ಯಡಮೊಗೆಯ ಹೊಸಬಾಳುವಿನಲ್ಲಿ ಗ್ರಾಮ ಪಂಚಾಯ್ತ್ ಅಧ್ಯಕ್ಷ ನಿಂದ ಹತ್ಯೆ ಗೊಂಡ ಉದಯ ಗಾಣಿಗ ಅವರ ಮನೆಗೆ ಕೆಪಿಸಿಸಿ ಅಧ್ಯಕ್ಷ ರಾದ ಡಿಕೆ ಶಿವಕುಮಾರ್ ಭೇಟಿ ನೀಡಿ ಅವರ ಪತ್ನಿ ಹಾಗೂ ಕುಟುಂಬಿಕರಿಗೆ ಸಾಂತ್ವನ ಹೇಳಿದರು.
ಬಿಜೆಪಿ ಪಕ್ಷದ ಮುಖಂಡರು ತಮ್ಮ ಪಕ್ಷದವರೇ ಆದ ಉದಯ್ ಗಾಣಿಗ ಅವರನ್ನು ಅಮಾನುಷವಾಗಿ ಹತ್ಯೆ ನಡೆಸಿರುವುದು ಖಂಡನೀಯ ಅವಿಭಜಿತ ದ.ಕ ಜಿಲ್ಲೆಯಲ್ಲಿ ಹತ್ಯೆಗಳು ನಡೆದಾಗ ಓಡೋಡಿ ಬರುತ್ತಿದ್ದ ಬಿಜೆಪಿಗರು ಇಂದು ತಮ್ಮ ಪಕ್ಷದ ಕಾರ್ಯಕರ್ತನ ಹತ್ಯೆ ನಡೆದಿದ್ದರೂ ಮೌನವಾಗಿರುವ ಬಗ್ಗೆ ಅನುಮಾನ ಹುಟ್ಟುತ್ತಿದೆ. ಹಿಂದೆಲ್ಲಾ ಹತ್ಯೆ ಪ್ರಕರಣಗಳು ನಡೆದಾಗ ಸಿಬಿಐ ತನಿಖೆಗೆ ನೀಡಿರುವ ದೃಷ್ಟಾಂತಗಳು ಇರುವುದರಿಂದ ಸರ್ಕಾರ ಕೂಡಲೇ ಈ ಪ್ರಕರಣದ ತನಿಖೆಯನ್ನು ಸಿಬಿಐ ಗೆ ಒಪ್ಪಿಸಬೇಕು ಎಂದು ಅವರು ಆಗ್ರಹಿಸಿದರು ಈ ಬಗ್ಗೆ ಸದನ ದಲ್ಲಿ ಮಾತನಾಡುತ್ತೇನೆ ಎಂದು ಭರವಸೆ ನೀಡಿದರು .
ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ವತಿಯಿಂದ 1.25 ಲಕ್ಷ ರೂ.ಚೆಕ್ ಅನ್ನು ಮೃತ ಉದಯ್ ಗಾಣಿಗ ಪತ್ನಿಯವರಿಗೆ ಹಸ್ತಾಂತರಿಸಿದರು.ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ,ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಂಗ್ರೆಸ್ ಪ್ರಮುಖರಾದ ಮಿಥುನ್ ಕುಮಾರ್ ರೈ, ಕಿಶನ್ ಹಗ್ಡೆ ಕೊಳ್ಕೆಬೈಲ್, ಎಸ್ ರಾಜು ಪೂಜಾರಿ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು .
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.