ಕೋಲಾರ (ವಿಶ್ವ ಕನ್ನಡಿಗ ನ್ಯೂಸ್):ತಾಲೂಕಿನ ವೇಮಗಲ್ ಹಾಗೂ ನರಸಾಪುರ ಹೋಬಳಿಯ ಮಾರ್ಗದ ರಸ್ತೆಯನ್ನು ದುರಸ್ಥಿಪಡಿಸುವಂತೆ ಆಗ್ರಹಿಸಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸೀತಿ ಹೊಸೂರು ಮುರಳಿ ಹಾಗೂ ವೇಮಗಲ್, ಕ್ಯಾಲನೂರು ಗ್ರಾಮದ ಜನತೆ ಜಿಲ್ಲಾಧಿಕಾರಿ ಡಾ. ಆರ್ ಸೆಲ್ವಮಣಿ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಸೀತಿ ಹೊಸೂರು ಮುರಳಿ ಮಾತನಾಡಿ, ತಾಲೂಕಿನ ಕೋಲಾರ ವೇಮಗಲ್ ಹಾಗೂ ನರಸಾಪುರ ವೇಮಗಲ್ ರಸ್ತೆ ತುಂಬಾ ಹದಗೆಟ್ಟಿದ್ದು, ವಾಹನ ಸವಾರರು ಈ ರಸ್ತೆಯಲ್ಲಿ ಸಂಚರಿಸಲು ಸಾಧ್ಯವಾಗುತ್ತಿಲ್ಲ ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಶೀಘ್ರದಲ್ಲಿ ರಸ್ತೆ ದುರಸ್ತಿ ಕಾಮಗಾರಿಯನ್ನು ಮಾಡಿಸಬೇಕು ಎಂದು ಮನವಿ ಮಾಡಿದರು.
ಈ ಭಾಗದ ಜನರು ಪ್ರತಿನಿತ್ಯ ಕೆಲಸ ಕಾರ್ಯಗಳಿಗೆ ತೆರಳಬೇಕಾದರೆ ಜೀವನ ಕೈಯಲ್ಲಿಡಿದು ಹದಗೆಟ್ಟಿದೆ ರಸ್ತೆಯಲ್ಲಿ ವಾಹನವನ್ನು ಚಲಾಯಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು. ಈಗಾಗಲೇ ಹದಗೆಟ್ಟಿರುವ ರಸ್ತೆ ಸಂಚಾರಿಸಿ ಸುಮಾರು ಮೂವರು ಮಂದಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.