ಕುಂದಾಪುರ,(ವಿಶ್ವ ಕನ್ನಡಿಗ ನ್ಯೂಸ್ ): ಅರಣ್ಯ ಸಚಿವ ಅರವಿಂದ ಲಿಂಬಾವಳಿ ಅವರು ಕುಂದಾಪುರದ ಪಂಚಗಂಗಾವಳಿ ಹಿನ್ನಿರು ಭಾಗದಲ್ಲಿರುವ ಕಾಂಡ್ಲಾವನ ವೀಕ್ಷಣೆ ಮಾಡಿದರು.ಕಾಂಡ್ಲಾವನ ಪರಿಚಯದ ಕಿರುಹೊತ್ತಿಗೆಯನ್ನು ಸಚಿವರು ಬಿಡುಗಡೆಗೊಳಿಸಿದ ಬಳಿಕ ಬೋಟ್ ಮೂಲಕ ಕುಂದಾಪುರದ ಪಂಚಗಂಗಾವಳಿ ಹಿನ್ನಿರು ಭಾಗದಲ್ಲಿರುವ ಕಾಂಡ್ಲಾವನವನ್ನ ಶಾಸಕರು ಮತ್ತು ಅಧಿಕಾರಿಗಳ ಜೊತೆ ವೀಕ್ಷಿಸಿದರು.ಕರಾವಳಿಯಾದ್ಯಂತ ಕಾಂಡ್ಲಾವನ ಬೆಳೆಸಲು ಅರಣ್ಯ ಇಲಾಖೆಯಿಂದ ಚಿಂತನೆ ನಡೆಸಲಾಗಿದೆ. ಕುಂದಾಪುರದ ಪ್ರಸಿದ್ಧ ಕಾಣೆ ಮೀನು ಈ ಪ್ರದೇಶದಲ್ಲಿಯೇ ಸಂತಾನೋತ್ಪತ್ತಿ ಮಾಡುತ್ತದೆ. ಇಕೋ ಟೂರಿಸಂಗೆ ಪ್ರಶಸ್ತ ಸ್ಥಳವಾಗಿದೆ. ಸಂಪೂರ್ಣ ಕರಾವಳಿಯ ಹಿನ್ನೀರಿನಲ್ಲಿ ಕಾಂಡ್ಲಾ ಬೆಳೆಸಲು ಸೂಚಿಸಲಾಗಿದೆ ಎಂದರು. ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ ಹಾಗೂ ಬೈಂದೂರು ಶಾಸಕರಾದ ಬಿ. ಎಂ. ಸುಕುಮಾರ್ ಶೆಟ್ಟಿ, ಕುಂದಾಪುರ ಉಪವಿಭಾಗಾಧಿಕಾರಿ ಕೆ.ರಾಜು, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಿಲ್ಲೋ ಟಾಗೋ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ನೇತಳ್ಕರ್, ಮೊದಲಾದರು ಸಚಿವರ ಜೊತೆ ಇದ್ದರು
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.