ಉಡುಪಿ,(ವಿಶ್ವ ಕನ್ನಡಿಗ ನ್ಯೂಸ್ ): ಕರಾವಳಿ ಬೈಪಾಸ್ ಬಳಿಯ ಕೂಲಿ ಕಾರ್ಮಿಕರ ಕಾಲೋನಿಯಲ್ಲಿ ಮಗುವಿನ ಅಪಹರಣ ನಡೆದು 12 ಗಂಟೆಯೊಳಗೆ ಆರೋಪಿ ಯನ್ನು ಪೊಲೀಸರು ಬಂಧಿಸಿದ್ದಾರೆ.ಕುಮುಟಾ ರೈಲು ನಿಲ್ದಾಣದಲ್ಲಿ ಆರೋಪಿ ಪರಶುರಾಮನನ್ನು ಪೊಲೀಸರು ಬಂಧಿಸಿದ್ದಾರೆ.ಉಡುಪಿ ಜಿಲ್ಲೆ ಮತ್ತು ಉತ್ತರ ಕನ್ನಡ ಜಿಲ್ಲೆಯ ಪೊಲೀಸರ ಜಂಟಿ ಕಾರ್ಯಾಚರಣೆಯಿಂದ ಎರಡು ವರ್ಷ ನಾಲ್ಕು ತಿಂಗಳ ಮಗುವನ್ನು ರಕ್ಷಿಸಲಾಗಿದೆ.ಬಾಗಲಕೋಟೆ ಮೂಲದ ಮುಧೋಳ ತಾಲೂಕಿನ ಭಾರತಿ ಮತ್ತು ಅರುಣ್ ದಂಪತಿ ಉಡುಪಿಯಲ್ಲಿ ಕೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದರು. ಪಕ್ಕದ ಗುಡಿಸಲಿನಲ್ಲಿದ್ದ ಪರಶು ಚಹಾ ಕುಡಿಸುತ್ತೇನೆ ಎಂದು 2.4 ವರ್ಷದ ಶಿವರಾಜ್ ನನ್ನು ಎತ್ತಿಕೊಂಡು ಹೋಗಿದ್ದಾನೆ. ಆರೋಪಿ ಬಾಗಲಕೋಟೆಯ ಪರಶು ಎಂಬಾತ ಅಪಹರಿಸಿದ್ದಾನೆ ಎಂದು ಪೋಷಕರು ಪೊಲೀಸರಿಗೆ ದೂರು ನೀಡಿದ್ದರುಮಗು ಅಪಹರಣದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಲಾಗಿತ್ತು. ಪರಶು ಎಂಬಾತ ಮಗುವನ್ನು ಎತ್ತಿಕೊಂಡು ನಗರದಿಂದ ಕುಂದಾಪುರ ಕಡೆ ಬಸ್ನಲ್ಲಿ ಹೋಗಿರುವುದು ತಿಳಿದುಬಂದಿದೆ. ಬಸ್ಸಿನ ನಿರ್ವಾಹಕರನ್ನು ವಿಚಾರಿಸಿದಾಗ ಸಂತೆ ಕಟ್ಟೆಯಲ್ಲಿ ಮಗುವಿನೊಂದಿಗೆ ಇಳಿದಿದ್ದಾನೆ. ಅಲ್ಲಿಂದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಬಸ್ ಹತ್ತಿ ಹೋಗಿದ್ದಾನೆ ಎಂದು ತಿಳಿಸಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.