ಶ್ರೀನಿವಾಸಪುರ (ವಿಶ್ವಕನ್ನಡಿಗ ನ್ಯೂಸ್) :- ಪುರಸಭೆ ಮುಖ್ಯಾಧಿಕಾರಿ ಕೊಳೆತು ನಾರುತ್ತಿರುವ ಮಾವಿನ ಮಂಡಿ ಪ್ರದೇಶದ ಸ್ವಚ್ಛತೆಗೆ ಅಗತ್ಯ ಗಮನ ನೀಡಬೇಕು. ಅಲ್ಲಿ ಉಂಟಾಗಿರುವ ಅನಾರೋಗ್ಯ ಪರಿಸರವನ್ನು ಸರಿಪಡಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರು ಸೂಚಿಸಿದರು.
ಪಟ್ಟಣದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಸರ್ಕಾರ ಹಾಗೂ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ , ತಾಲ್ಲೂಕಿನ ಕಾರ್ಮಿಕರಿಗೆ ದಿನಸಿ ಹಾಗೂ ಸುರಕ್ಷಾ ಕಿಟ್ ವಿತರಿಸಿ ಮಾತನಾಡಿ , ಕೋವಿಡ್ ಸಂದರ್ಭದಲ್ಲಿ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರಿಗೆ ಅಗತ್ಯವಾದ ನೆರವು ನೀಡಲಾಗುವುದು ಎಂದು ಹೇಳಿದರು. ಮಾರುಕಟಯಲ್ಲಿ ಕೋವಿ ನಿಯಮ ಪಾಲನೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು.
ಮಾವು ಖರೀದಿಗೆ ದೇಶದ ವಿವಿಧ ರಾಜ್ಯಗಳಿಂದ ವ್ಯಾಪಾರಿಗಳು ಮತ್ತಿತರರು ಬರುತ್ತಾರೆ. ಅವರ ಬಗ್ಗೆಯೂ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ಮಾಡಿದರು. ತಾಲ್ಲೂಕಿನಲ್ಲಿ ವಿದ್ಯಾರ್ಥಿ ನಿಲಯಗಳಿಗೆ ಅಗತ್ಯವಾದ ಮೂಲ ಸೌಕರ್ಯ ಕಲ್ಪಿಸಲಾಗುವುದು . ಪಟ್ಟಣದ ವಿವಿಧ ಬಡಾವಣೆಗಳ ಬಡವರಿಗೆ ಮನೆ ನಿವೇಶನ ನೀಡಲಾಗುವುದು. ಪಟ್ಟಣದಲ್ಲಿ ರಸ್ತೆ ನಿರ್ಮಾಣ ಹಾಗೂ ದುರಸ್ತಿಗೆ ಗಮನ ನೀಡಲಾಗುವುದು ಎಂದು ಹೇಳಿದರು. ಈ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ , ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್ಆನಂದ್ , ಪುರಸಭಾಧ್ಯಕ್ಷ ಲಲಿತಾ ಶ್ರೀನಿವಾಸ್ , ಮುಖ್ಯಾಧಿಕಾರಿ ಸತ್ಯನಾರಾಯಣ , ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ಎಂ. ಶ್ರೀನಿವಾಸ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ಪುರಸಭ ಸದಸ್ಯ ಕೆ. ಅನೀಸ್ ಅಹಮ್ಮದ್, ಮುಖಂಡರಾದ ಬಿ ಜಿ ಸೈಯದ್ ಖಾದರ್,ಕೆ.ಕೆ.ಮಂಜುನಾಥರೆಡ್ಡಿ , ಅಧಿಕಾರಿ ಆಶಾರಾಣಪ್ಪ ಹಾಗೂ ಪುರಸಭೆ ಸಿಬ್ಬಂದಿ ವರ್ಗ ಮತ್ತು ಇತರರು ಇದ್ದರು.
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.