ಕುಂದಾಪುರ,(ವಿಶ್ವ ಕನ್ನಡಿಗ ನ್ಯೂಸ್ ): ಯಡಮೊಗೆ ಉದಯ್ ಗಾಣಿಗ ಕೊಲೆ ಪ್ರಕರಣವನ್ನು ಖಂಡಿಸಿ, ಸರ್ಕಾರಗಳ ಭ್ರಷ್ಟಾಚಾರ ಹಾಗೂ ಬೆಲೆ ಏರಿಕೆಯ ವಿರುದ್ದ ಸಿದ್ದಾಪುರದಲ್ಲಿ ವಂಡ್ಸೆ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನಾ ಸಭೆ ನಡೆಯಿತು.ಈ ಭಾಗದ ಸಂಸದರು, ಶಾಸಕರು ಉದಯ್ ಗಾಣಿಗ ಕೊಲೆ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನದಲ್ಲಿದ್ದಾರೆ. ಈ ಕೊಲೆ ಪ್ರಕರಣ ತನಿಖೆಯ ದಿಕ್ಕು ತಪ್ಪುವ ಸಾಧ್ಯತೆಗಳಿದ್ದು ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಹಾಗೂ ಉದಯ್ ಗಾಣಿಗ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದರು , ಮಾಜಿ ಶಾಸಕ ಗೋಪಾಲ್ ಪೂಜಾರಿ ಮತಾಡಿದರು . ಸಂದರ್ಭದಲ್ಲಿ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಶರತ್ ಕುಮಾರ್ ಶೆಟ್ಟಿ, ಸಂಪಿಗೇಡಿ ಸಂಜೀವ ಶೆಟ್ಟಿ, ವಾಸುದೇವ ಪೈ, ರಮೇಶ್ ಗಾಣಿಗ, ಪ್ರಕಾಶ್ಚಂದ್ರ ಶೆಟ್ಟಿ, ರಾಜು ಪೂಜಾರಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಂಜುಳಾ ದೇವಾಡಿಗ, ಮೊದಲಾದವರು ಪ್ರತಿಭಟನೆ ಸಭೆಯಲ್ಲಿ ಭಾಗಿಯಾಗಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.