ಬೆಂಗಳೂರು (www.vknews.com) : ಬ್ಲಡ್ ಡೋನರ್ಸ್ ಮಂಗಳೂರು(ರಿ) ಸಂಸ್ಥೆಯ ವತಿಯಿಂದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ಆದಿತ್ಯವಾರ ಸಿಟಿ ಸೆಂಟರ್ ಹತ್ತಿರ ಗಾಂಧಿನಗರ ಮೆಜೆಸ್ಟಿಕ್ ಬೆಂಗಳೂರಿನಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ರಕ್ತದಾನ ಶಿಬಿರದಲ್ಲಿ ಸಾರ್ವಜನಿಕರಿಂದ 103 ಯೂನಿಟ್ ರಕ್ತ ಸಂಗ್ರಹಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಮೆಜೆಸ್ಟಿಕ್ ವಿಸ್ಡಂ ಮಸೀದಿ ಖತೀಬರಾದ ಶಾಫಿ ಸಅದಿ ಇವರು ರಕ್ತದಾನ ಮಾಡುವುದರ ಮೂಲಕ ಉದ್ಘಾಟಿಸಿದರು. ನಂತರ ರೆಡ್ ಕ್ರಾಸ್ ಸಂಸ್ಥೆ ಬೆಂಗಳೂರಿನ ಮುಖ್ಯಸ್ಥೆ ರೇಶ್ಮಾ ರೈ ಬೆಂಗಳೂರು ಮಾತನಾಡಿ ರಕ್ತದಾನ ಶಿಬಿರಕ್ಕೆ ಶುಭ ಹಾರೈಸಿದರು.
ರಕ್ತದಾನ ಮಾಡಿದ ರಕ್ತದಾನಿಗಳಿಗೆ ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು….ನಮ್ಮ ಸಂಸ್ಥೆಯ ಜೊತೆ ಕೈ ಜೋಡಿಸಿದ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಲು ಕಾರಣವಾದ ರೆಡ್ ಕ್ರಾಸ್ ಸಂಸ್ಥೆ ಬೆಂಗಳೂರು ಇವರಿಗೆ ಬ್ಲಡ್ ಡೋನರ್ಸ್ ಮಂಗಳೂರು(ರಿ)ಸಂಸ್ಥೆಯ ವತಿಯಿಂದ ಸ್ಮರಣಿಕೆ ನೀಡಿ ಗೌರವಿಸಲಾಯಿತು….ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ ಕಾರ್ಯವೈಖರಿಯನ್ನು ಮೆಚ್ಚಿ ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ ಪ್ರಶಂಸ ಪತ್ರ ನೀಡಿ ಗೌರವಿಸಿದರು….
ಈ ಸಂದರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರ) ಸಂಸ್ಥೆಯ ಉಪಾಧ್ಯಕ್ಷರಾದ ಅಶ್ರಫ್ ಉಪ್ಪಿನಂಗಡಿ, ಪ್ರಧಾನ ಕಾರ್ಯದರ್ಶಿ ನವಾಝ್ ಕಲ್ಲರಕೋಡಿ, ಕಾರ್ಯನಿರ್ವಾಹಕರಾದ ಫಾರೂಕ್ ಬಿಗ್ ಗ್ಯಾರೇಜ್, ಇರ್ಶಾದ್ ಉಚ್ಚಿಲ,ನಿಝಾಮುದ್ದೀನ್ ಉಪ್ಪಿನಂಗಡಿ, ಇರ್ಫಾನ್ ಕಲ್ಲಡ್ಕ ಸದಸ್ಯರಾದ ರಫೀಕ್ ಪಾನೇಲ, ನೌಶಾದ್ ಮಂಜನಾಡಿ, ಸಾದಿಕ್ ಮುಡಿಪು ಉಪಸ್ಥಿತರಿದ್ದರು.
ಬಹಳ ಯಶಸ್ವಿಯಾಗಿ ನಡೆದ ಕಾರ್ಯಕ್ರಮದ ಕುರಿತು ಸ್ಥಳೀಯ ನಿವಾಸಿಗಳು ಅಭಿನಂದಿಸಿದ್ದು, ಸಂಸ್ಥೆಯ ಕಾರ್ಯ ವೈಖರಿ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರಕಟಣೆ:ಮಾಧ್ಯಮ ವಿಭಾಗ ಬ್ಲಡ್ ಡೋನರ್ಸ್ ಮಂಗಳೂರು(ರಿ)
ಪ್ರಧಾನ ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.