ಜೆದ್ದಾ(www.vknews.in): ಸೌದಿ ಅರೇಬಿಯಾವು ಪುರಾತನ ಕಟ್ಟುಪಾಡೊಂದಕ್ಕೆ ತಿಲಾಂಜಲಿಯಿಟ್ಟಿದೆ. ಸೌದಿ ಚೇಂಬರ್ಸ್ ಫೆಡರೇಶನ್ ಗುರುವಾರ ಹೊರಡಿಸಿದ ಸುತ್ತೋಲೆಯ ಪ್ರಕಾರ, ಸೌದಿಯಲ್ಲಿ ಪ್ರಾರ್ಥನೆ ಸಮಯದಲ್ಲಿ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳು ತೆರೆದಿಡಬಹುದಾಗಿದೆ. ಪ್ರಾರ್ಥನೆ ಸಮಯ ಸೇರಿದಂತೆ ಕೆಲಸದ ಸಮಯದಾದ್ಯಂತ ವಾಣಿಜ್ಯ ಮತ್ತು ಆರ್ಥಿಕ ಚಟುವಟಿಕೆಗಳನ್ನು ಮುಂದುವರಿಸಬಹುದು ಎಂದು ಫೆಡರೇಶನ್ ತನ್ನ ನಿರ್ದೇಶನದಲ್ಲಿ ತಿಳಿಸಿದೆ.
ಪ್ರಾರ್ಥನೆ ಸಲ್ಲಿಸುವಲ್ಲಿ ಕಾರ್ಮಿಕರು, ವ್ಯಾಪಾರಿಗಳು ಮತ್ತು ಗ್ರಾಹಕರಿಗೆ ಅಡ್ಡಿಯಾಗದ ರೀತಿಯಲ್ಲಿ ಅಗತ್ಯ ವ್ಯವಸ್ಥೆಗಳನ್ನು ಮಾಡಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲು ಅವರಿಗೆ ಸೂಚನೆ ನೀಡಲಾಗಿದೆ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.