ಕುಂದಾಪುರ ,(ವಿಶ್ವ ಕನ್ನಡಿಗ ನ್ಯೂಸ್ ): ಪ್ರತಿ ವರ್ಷದಂತೆ ಈ ಬಾರಿಯೂ ಕೂಡ ಪುರಾಣ ಪ್ರಸಿದ್ಧ ಶ್ರೀ ಕ್ಷೇತ್ರ ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರೀ ದೇಗುಲದ ಗರ್ಭ ಗುಡಿಗೆ ಕುಬ್ಜಾ ನದಿ ನೀರು ನುಗ್ಗಿ ದೇವಿಯ ಮೂರ್ತಿಯನ್ನು ತೋಯಿಸಿದೆ. ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರೀ ದೇವಾಲಯವು ಕುಬ್ಜೆ ನದಿ ಹಾಗೂ ನಾಗತೀರ್ಥಗಳ ಸಂಗಮ ಸ್ಥಳದಲ್ಲಿದ್ದು, ಕಳೆದ ವಾರದಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಉದ್ಭವಲಿಂಗಕ್ಕೆ ಪ್ರಾಕೃತಿಕ ಗಂಗಾಭಿಷೇಕವಾಗಿದೆ. ದೇವಾಲಯದ ಪ್ರಾಂಗಣಕ್ಕೆ ನೀರು ಹರಿದು ಬರುತ್ತಿದ್ದಂತೆ ದೇವಾಲಯಕ್ಕೆ ಆಗಮಿಸಿದ ಸುತ್ತ ಮುತ್ತಲಿನ ಭಕ್ತರು ಪವಿತ್ರ ನೀರಿನಲ್ಲಿ ಸ್ನಾನ ಮಾಡಿ ಪುನೀತರಾದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.