ಮಂಗಳೂರು,(ವಿಶ್ವ ಕನ್ನಡಿಗ ನ್ಯೂಸ್ ): ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ನಿಧನರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣ ಗಳಲ್ಲಿ ಹರಡುತ್ತಿದ್ದೂ ಚಿಕಿತ್ಸೆ ಪಡೆಯುತ್ತಿದ್ದಾರೆ ದಯಮಾಡಿ ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದು ಅವರ ಕುಟುಂಬದ ಮೂಲಗಳು ತಿಳಿಸಿದೆ.ಕಾಂಗ್ರೆಸ್ ಹಿರಿಯ ಮುಖಂಡ ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ತೀವ್ರ ಅಸ್ವಸ್ಥರಾಗಿ ಮಂಗಳೂರಿನ ಯನೆಪೋಯ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರು ನಿಧನರಾಗಿದ್ದಾರೆ ಎಂಬುದು ಸುಳ್ಳು ಸುದ್ದಿ ಎಂದು ಅವರ ಕುಟುಂಬದ ಮೂಲಗಳು ತಿಳಿಸಿದೆ.ತೀವ್ರ ಅಸ್ವಸ್ಥರಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿರುವ ಆಸ್ಕರ್ ಫೆರ್ನಾಂಡಿಸ್ ನಿಧನರಾಗಿದ್ದಾರೆ ಎಂದು ಗುರುವಾರ ರಾತ್ರಿ ವದಂತಿ ಹರಡಿದೆ. ಆದರೆ ಅವರಿಗೆ ಈಗಲೂ ಚಿಕಿತ್ಸೆ ನಡೆಯುತ್ತಿದ್ದು ಅವರು ಚೇತರಿಸಿಕೊಳ್ಳುವಂತೆ ಪ್ರಾರ್ಥಿಸಿ ಹಾಗು ವದಂತಿ ಹರಡಬೇಡಿ ಎಂದು ಅವರ ಕುಟುಂಬ ತಿಳಿಸಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.