ಶ್ರೀನಿವಾಸಪುರ (ವಿಶ್ವ ಕನ್ನಡಿಗ ನ್ಯೂಸ್ ):- ಗ್ರಾಮಗಳಲ್ಲಿ ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಲಾಗಿದೆ ಎಂದು ಮಾಸ್ಕನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಂಗವಾದಿ ರವಿಕುಮಾರ್ ಹೇಳಿದರು.
ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗೌಡಹಳ್ಳಿ ಹಾಗೂ ಬಿಸನಹಳ್ಳಿ ಗ್ರಾಮಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿ , ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಮುಂಜಾಗ್ರತೆ ವಹಿಸಿದ ಪರಿಣಾಮವಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಮಸ್ಯೆ ಅಷ್ಟಾಗಿ ಕಾಡುತ್ತಿಲ್ಲ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಿನ್ನಪ್ಪ , ಕಾರ್ಯದರ್ಶಿ ಶ್ರೀನಿವಾಸರೆಡ್ಡಿ , ಮುಖಂಡರಾದ ಬಂಗವಾದಿ ನಾಗರಾಜ್ , ವೆಂಕಟರಾಮಪ್ಪ , ವೆಂಕಟಾಚಲಪತಿ , ಕಷ್ಟ , ಬರಗನಹಳ್ಳಿ ವೆಂಕಟಾಚಲಪತಿ , ಮುನಿರಾಜು , ಗಿರೀಶ್ , ವೆಂಕಟರಾಮಪ್ಪ ಇದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.