ಬೆಂಗಳೂರು(ವಿಶ್ವಕನ್ನಡಿಗ ನ್ಯೂಸ್): ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಶಾಸಕ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬೊಮ್ಮಾಯಿ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ.
ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿ, ಬಿಜೆಪಿ ರಾಜ್ಯ ಘಟಕದ ಉಸ್ತುವಾರಿ ಅರುಣ್ ಸಿಂಗ್ ಉಪಸ್ಥಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಅವಿರೋಧವಾಗಿ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ ಎಂದು ತಿಳಿದಿದೆ.
ನಾಳೆ ಬುಧವಾರ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.